ಶಿಕ್ಷಕರ ನೇಮಕ - ಸಚಿವ ನಾಗೇಶ್

ಬುಧವಾರ, 26 ಜನವರಿ 2022 (21:01 IST)
ರಾಜ್ಯದಲ್ಲಿ ಶಿಕ್ಷಕರ  ಕೊರತೆ ನೀಗಿಸಲು 'ಕಲ್ಯಾಣ ಕನಾ೯ಟಕ' ಭಾಗಕ್ಕೆ ಭಾರತ ಸಂವಿಧಾನದ ಅನುಚ್ಛೇದ 371 ಜೆ ಅನುಸಾರ 5 ಸಾವಿರ ಶಿಕ್ಷಕರು ಸೇರಿದಂತೆ ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಶಿಕ್ಷಣ ಸಚಿವ ಮತ್ತು ಕೊಡಗು ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
 
ಮಡಿಕೇರಿಯಲ್ಲಿ ಗಣರಾಜ್ಯೋತ್ಸವ ಸಂದಭ೯ ರಾಷ್ಟ್ರದ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವ ನಾಗೇಶ್, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆ ತರುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಕಾ೯ರ ಜಾರಿಗೆ ತಂದಿರುವ  'ರಾಷ್ಟ್ರೀಯ ಶಿಕ್ಷಣ ನೀತಿ-2020'ನ್ನು ಮುಂದಿನ ವರ್ಷದಿಂದ ಕನರ್ಾಟಕದಲ್ಲಿ ಅನುಷ್ಠಾನಗೊಳಿಸುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ ಪೂರ್ವ ಪ್ರಾಥಮಿಕ ಶಾಲೆಯಿಂದ ಅಂದರೆ 'ಪೂರ್ವ ಬಾಲ್ಯವಸ್ಥೆ ಶಿಕ್ಷಣ ಮತ್ತು ಆರೈಕೆ' ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದರು.
ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ.ಯು ಮುಖ್ಯ ಪರೀಕ್ಷೆಗಳ ತಾತ್ಕಾಲಿಕ  ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತದೆ. ಮಕ್ಕಳು ಪರೀಕ್ಷೆ ಬರೆಯಲು ಸಿದ್ದತೆ ಮಾಡಿಕೊಳ್ಳಬೇಕು ಎಂದು ಹೇಳಿದ ಸಚಿವರು, ರೈತರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಪಡೆಯುವಂತಾಗಲು ಹೊಸದಾಗಿ ಶಿಷ್ಯವೇತನ ನೀಡಲು ಒಂದು ಸಾವಿರ ಕೋಟಿ ರೂಪಾಯಿ ಹಣ ಮೀಸಲಿಡಲು ಸಕಾ೯ರ ನಿರ್ಧರಿಸಿದೆ  ಎಂದು ಮಾಹಿತಿ ನೀಡಿದರು. 
ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದಜರ್ೆಗೆ ಏರಿಸಲಾಗಿದೆ. ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್ ಪ್ರತಿರೋಧ ಲಸಿಕೆ ನೀಡಿರುವುದು ವಿಶೇಷವಾಗಿದೆ. ಕೋವಿಡ್-19 ನಿಯಂತ್ರಣ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ಅಗತ್ಯ ಕ್ರಮವಹಿಸಲಾಗಿದ್ದು, ಇದುವರೆಗೆ 15 ವರ್ಷ ಮೇಲ್ಪಟ್ಟ 4,23,115 ಮಂದಿಯಲ್ಲಿ 4,27,225 ಮಂದಿಗೆ ಪ್ರಥಮ ಡೋಸ್ ಕೋವಿಡ್ ನಿರೋಧಕ ಲಸಿಕೆ ನೀಡಿ ಶೇ. 100 ಕ್ಕಿಂತ ಹೆಚ್ಚು ಸಾಧನೆ  ಮಾಡಲಾಗಿದೆ.       ಹಾಗೆಯೇ 3,82,883 ಮಂದಿ ಎರಡನೇ ಡೋಸ್ ಪಡೆದು ಶೇ.90 ಕ್ಕಿಂತ ಹೆಚ್ಚು ಮಂದಿ ಜನವರಿ, 13 ರವರೆಗೆ ಎರಡನೇ ಡೋಸ್  ಪಡೆದಿದ್ದಾರೆ. ಪ್ರತೀ ತಾಲ್ಲೂಕಿನಲ್ಲಿ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಆಮ್ಲಜನಕ ಪೂರೈಕೆ ವ್ಯವಸ್ಥೆ ಇರುವ 680 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. 50 ವೆಂಟಿಲೇಟರ್, 50 ಐಸಿಯು ಜಿಲ್ಲಾಸ್ಪತ್ರೆಯಲ್ಲಿದೆ ಎಂದೂ ಸಚಿವ ನಾಗೇಶ್ ತಿಳಿಸಿದರು.
ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಎರಡು ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ. ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಕೊಡಗು ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಈಗ ಬೂಸ್ಟರ್ ಡೋಸ್ನ್ನು ಮುಂಚೂಣಿ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. 
ಮುಂದಿನ ಶೈಕ್ಷಣಿಕ ಸಾಲಿನಿಂದ ರೈತ ವಿದ್ಯಾನಿಧಿ ಯೋಜನೆಯನ್ನು ಗ್ರಾಮೀಣ ಪ್ರದೇಶದ ಪ್ರೌಢಶಾಲೆಯ ವಿದ್ಯಾಥಿ೯ನಿಯರಿಗೂ ವಿಸ್ತರಿಸಲಾಗುತ್ತದೆ. ರಾಜ್ಯ ಸಕಾ೯ರದಿಂದ ಜಿಲ್ಲೆಗೊಂದು ಗೋಶಾಲೆ ತೆರೆಯುವ ಕಾರ್ಯಕ್ರಮದಲ್ಲಿ  ಕೊಡಗು ಜಿಲ್ಲೆಗೆ ರೂ 36 ಲಕ್ಷ ಬಿಡುಗಡೆಯಾಗಿದ್ದು, ಈಗಾಗಲೇ ಜಿಲ್ಲೆಯಲ್ಲಿ ಗೋಶಾಲೆ ಪ್ರಾರಂಬಿಸಲು ಜಾಗ ಗುರುತಿಸಲಾಗಿದ್ದು ಗೋಶಾಲೆ ಪ್ರಾರಂಬಿಸಲು ಕ್ರಮವಹಿಸಲಾಗಿದೆ.
ಅಮೃತ್ ನಿರ್ಮಲ ನಗರ ಯೋಜನೆಯಡಿ ಘನತ್ಯಾಜ್ಯ ನಿರ್ವಹಣೆಗಾಗಿ ಮಡಿಕೇರಿ ನಗರಸಭೆ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿಗಳಿಗೆ ತಲಾ ರೂ 100 ಲಕ್ಷಗಳು ಮಂಜೂರಾಗಿದ್ದು, ಕ್ರಿಯಾಯೋಜನೆ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ನಾಗೇಶ್ ಹೇಳಿದರು.ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ತೊಂದರೆಗೊಳಗಾದ ಸುಮಾರು 47,757 ರೈತರಿಗೆ ಅಂದಾಜು 64ಕೋಟಿ ರೂಪಾಯಿ ಪರಿಹಾರವನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತರಾದ 300ಕ್ಕೂ ಕಹೆಚ್ಚು ಮಂದಿಯ ವಾರಸುದಾರರಿಗೆ ರೂಪಾಯಿ 50 ಸಾವಿರ ಪರಿಹಾರವನ್ನು ನೀಡಲಾಗಿದೆ. 158 ಬಿಪಿಎಲ್ ಕುಟುಂಬದ ವಾರಸುದಾರರಿಗೆ ಹೆಚ್ಚುವರಿ ರೂಪಾಯಿ 1ಲಕ್ಷ ಪರಿಹಾರ ವಿತರಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ