ಕಡ್ಡಾಯ ವರ್ಗಾವಣೆ ವಿರೋಧಿಸಿ ಶಿಕ್ಷಣ ಸಚಿವರ ನಿವಾಸದ ಮುಂದೆ ಮೌನ ಪ್ರತಿಭಟನೆ ನಡೆಸಿದ ಶಿಕ್ಷಕರು

ಮಂಗಳವಾರ, 3 ಸೆಪ್ಟಂಬರ್ 2019 (11:53 IST)
ಬೆಂಗಳೂರು : ಶಿಕ್ಷಕರ ಕಡ್ಡಾಯ ವರ್ಗಾವಣೆ ವಿರೋಧಿಸಿ ಹಾಗೂ ಕಡ್ಡಾಯ ವರ್ಗಾವಣೆ ಹೆಸರಿನಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಶಿಕ್ಷಕರು ಇಂದು ಸುರೇಶ್‌ ಕುಮಾರ್‌ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಧರಣಿ ನಡೆಸಿದ್ದಾರೆ.




ಹಲವು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು, ಇಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬಸವೇಶ್ವರ ನಗರದ ನಿವಾಸದ ಎದುರು ಹೊಸ ವರ್ಗಾವಣೆ ನೀತಿ ವಿರುದ್ಧ ಮೌನ ಪ್ರತಿಭಟನೆ ನಡೆಸಿದ್ದಾರೆ . ಕಡ್ಡಾಯ ವರ್ಗಾವಣೆ ಹೆಸರಿನಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.


ಬಳಿಕ ಈ ಬಗ್ಗೆ ಮಾತನಾಡಿದ ಸಚಿವರು, ಶಿಕ್ಷಕರ ಕಡ್ಡಾಯ ವರ್ಗಾವಣೆ ಅವೈಜ್ಞಾನಿಕವಾಗಿರುವ ಹಿನ್ನೆಲೆಯಲ್ಲಿ ಕೂಡಲೇ ಶಿಕ್ಷಕರ ಕಡ್ಡಾಯ ವರ್ಗಾವಣೆಯನ್ನು ನಿಲ್ಲಿಸಲಾಗಿದೆ. ಎಲ್ಲ ಶಿಕ್ಷಕರಿಗೂ ಅನುಕೂಲವಾಗುವಂತೆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ