ಕಾನೂನು ಬಾಹಿರ ಕೆಲಸ ಮಾಡಿದ ತಹಸೀಲ್ದಾರ್ ಸಸ್ಪೆಂಡ್

ಬುಧವಾರ, 23 ಅಕ್ಟೋಬರ್ 2019 (18:21 IST)
ನಿಯಮ ಬಾಹಿರವಾಗಿ ಮತ್ತು ಅಧಿಕಾರ ವ್ಯಾಪ್ತಿ ಮೀರಿ ಕೆಲಸ ಮಾಡಿದ ತಹಸೀಲ್ದಾರ್ ಒಬ್ಬರು ಸೇವೆಯಿಂದ ಅಮಾನತ್ ಆಗಿದ್ದಾರೆ.

ನಿಯಮ ಬಾಹಿರ ಹಾಗೂ ಅಧಿಕಾರ ವ್ಯಾಪ್ತಿ ಮೀರಿ ಖಾತಾ ವರ್ಗಾವಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ  ಆಳಂದ ತಾಲೂಕಿನ ಖಜೂರಿ ನಾಡ ಕಚೇರಿಯ ಉಪ ತಹಶೀಲ್ದಾರ ಗುರುಲಿಂಗಯ್ಯ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಹೀಗಂತ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್  ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಭೂ ಕಂದಾಯ ನಿಯಮಗಳು 1966 ನಿಯಮ 43ನ್ನು ಉಲ್ಲಂಘಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ನಡೆಸಲು ಉಪ ತಹಶೀಲ್ದಾರ ಗುರುಲಿಂಗಯ್ಯ ಅವರನ್ನು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10 (1) (ಡಿ) ಅಡಿಯಲ್ಲಿ ಕೂಡಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ