ಬೆಂಗಳೂರು: ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಸಸ್ಪೆಂಡ್ ಆದ ಅಧಿಕಾರಿ ಪ್ರವೀಣ್ ಕುಮಾರ್ ಬಗ್ಗೆ ಸಂಸದ ತೇಜಸ್ವಿ ಸೂರ್ಯ ದೊಡ್ಡ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ.
ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರೀ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಅದರಂತೆ ಆರ್ ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಪ್ರವೀಣ್ ಕುಮಾರ್ ಎನ್ನುವ ಅಧಿಕಾರಿಯನ್ನು ಅಮಾನತು ಮಾಡಲಾಗಿತ್ತು.
ಈ ಅಧಿಕಾರಿಯ ಪರ ಈಗ ತೇಜಸ್ವಿ ಸೂರ್ಯ ನಿಂತಿದ್ದಾರೆ. ಜೊತೆಗೆ ಆತನ ಜೊತೆ ಕಾನೂನು ಹೋರಾಟಕ್ಕೆ ನಿಲ್ಲುವುದಾಗಿ ಹೇಳಿದ್ದಾರೆ. ಶ್ರೀ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು, ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತುಗೊಳಿಸಿದ ಅಧಿಕಾರಿ ಶ್ರೀ ಪ್ರವೀಣ್ ಕುಮಾರ್ ರೊಂದಿಗೆ ನಾನು ಮಾತನಾಡಿದ್ದು, ಈ ಕಾನೂನುಬಾಹಿರ ಮತ್ತು ಅಕ್ರಮ ಅಮಾನತನ್ನು ಪ್ರಶ್ನಿಸಲು ನಾನು ವೈಯಕ್ತಿಕವಾಗಿ ಸಂಬಂಧಪಟ್ಟ ನ್ಯಾಯಾಧಿಕರಣ ಮತ್ತು ನ್ಯಾಯಾಲಯಗಳ ಮುಂದೆ ಹಾಜರಾಗುತ್ತೇನೆ ಎಂದು ಅವರಿಗೆ ಭರವಸೆ ನೀಡಿದ್ದೇನೆ.
ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸರ್ಕಾರಿ ನೌಕರರ ಹಕ್ಕನ್ನು ಎತ್ತಿಹಿಡಿದಿರುವ ಅನೇಕ ಹೈಕೋರ್ಟ್‌ಗಳ ತೀರ್ಪುಗಳಿವೆ. ಈ ಅಕ್ರಮ ಅಮಾನತು ರದ್ದಾಗುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ ಎಂದಿದ್ದಾರೆ.