ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

Krishnaveni K

ಸೋಮವಾರ, 21 ಜುಲೈ 2025 (15:04 IST)
ಬೆಂಗಳೂರು: ಒಂದೆಡೆ ಸಿಎಂಗೆ ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಪಾರ್ವತಿಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದರೆ ಇತ್ತ ಸಂಸದ ತೇಜಸ್ವಿ ಸೂರ್ಯಗೆ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂಬ ಕೇಸ್ ನಲ್ಲಿ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.

ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಇದನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು ತೇಜಸ್ವಿ ಸೂರ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ನ್ಯಾ. ಬಿಆರ್ ಗವಾಯಿ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿದ್ದು ಇದು ನ್ಯಾಯಾಂಗ ವೀಕ್ಷಣೆಗೆ ಒಳಪಟ್ಟ ವಿಷಯವಲ್ಲ ಎಂದು ಹೇಳಿ ಅರ್ಜಿಯನ್ನು ರದ್ದುಗೊಳಿಸಿದೆ.  ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸರ್ಕಾರದ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

ರಾಜಕೀಯ ವಿಚಾರಗಳನ್ನು ಕೋರ್ಟ್ ಗೆ ತರಬೇಡಿ. ಇದನ್ನು ನ್ಯಾಯಾಲಯದ ಹೊರಗೇ ಇತ್ಯರ್ಥ ಮಾಡಿಕೊಳ್ಳಿ ಎಂದು ನ್ಯಾ. ಗವಾಯಿ ಚಾಟಿ ಬೀಸಿದ್ದಾರೆ. ಪಹಣಿಯಲ್ಲಿ ವಕ್ಫ್ ಹೆಸರು ನಮೂದಿಸಿದ್ದರಿಂದ ರೈತ ರುದ್ರಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದಕ್ಕೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ