ರಾಜ್ಯದಲ್ಲಿ ತಾಪಮಾನ ಏರಿಕೆ

ಭಾನುವಾರ, 13 ಮಾರ್ಚ್ 2022 (16:33 IST)
ರಾಜ್ಯದಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಬೇಸಿಗೆ ಕಾಲ ಪ್ರಾರಂಭ ಆಗುತ್ತಿದ್ದಂತೆ ಬಿಸಿಲ ಧಗೆ ರಾಜ್ಯದಲ್ಲಿ ಏರಿಕೆ ಆಗುತ್ತಲೇ ಇದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕವಾಗಿದೆ.
ರಾಜ್ಯದಲ್ಲಿ ಅತೀ ಹೆಚ್ಚಿನ ಉಷ್ಣಾಂಶ ರಾಯಚೂರಿನಲ್ಲಿ ಇದ್ದು, ಜಿಲ್ಲೆಯಲ್ಲಿ ತಾಪಮಾನ 37.0 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ.
 
ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ