ಬೆಂಗಳೂರು : ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್ ನಾರಾಯಣ್ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಮೊನ್ನೆ ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದತಿಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಥ್ನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅಶ್ವಥ್ನಾರಾಯಣ್ ವಿರುದ್ಧದ ಎಫ್ಐಆರ್ಗೆ ಸಂಬಂಧಿಸಿದ ತನಿಖೆಗೆ ನಾಲ್ಕು ವಾರ ತಡೆ ನೀಡಿ ಆದೇಶ ನೀಡಿದೆ.
ಅಶ್ವಥ್ನಾರಾಯಣ್ ವಿರುದ್ಧದ ತನಿಖೆಗೆ ನಾಲ್ಕು ವಾರ ತಡೆ ನೀಡಲಾಗಿದ್ದು, ಅಷ್ಟರೊಳಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಿಚಾರಣೆ ಮುಂದೂಡಿದೆ.