ಸಾವನ್ನಪ್ಪಿದ ವೃದ್ಧನ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ ಎಂದು ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ. ನಗರದಲ್ಲಿ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಲುಷಿತ ನೀರು ಸೇವಿಸಿ ರಾಮದುರ್ಗದಲ್ಲಿ ಹಲವಾರು ಜನರು ಅಸ್ವಸ್ಥರಾಗಿದ್ದಾರೆ. ಸದ್ಯಕ್ಕೆ ಎಲ್ಲರ ಆರೋಗ್ಯವೂ ಸ್ಥಿರವಾಗಿದೆ.
ಅಸ್ವಸ್ಥರ ಕುರಿತು ಹೆಚ್ಚಿನ ಕಾಳಜಿವಹಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಡಿಎಚ್ಒ ಅವರಿಗೆ ಸೂಚಿಸಿದ್ದೇನೆ ಎಂದರು.
ಇನ್ನು ಮುದೇನೂರ ಗ್ರಾಮದಲ್ಲಿ ಆರ್ಓ ಪ್ಲಾಂಟ್ ಇದೆ. ಜನರು ಆರ್ಓ ಪ್ಲಾಂಟ್ ನೀರನ್ನೇ ಕುಡಿಯಬೇಕು. ಸಿಎಂ ಜೊತೆ ಮಾತಾಡಿ ಮೃತ ಶಿವಪ್ಪ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೇಳಿದ್ದೇನೆ. ಅದಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ.