ಜನವರಿ 1 ರಂದು ಬೆಂಗಳೂರಿನಲ್ಲಿ 810 ಸೋಂಕಿತರು ಪತ್ತೆಯಾಗಿದ್ದರು.
ನನ್ನೆ 9221 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಸೋಂಕಿನ ಪ್ರಮಾಣ ಏರಿಕೆಯಾದ್ರು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಶೇ.1% ರಷ್ಟಿದೆ. ಆದರೆ ಫೆಬ್ರವರಿ ಮೊದಲ ವಾರ ಹಾಗೂ ಎರಡನೇ ವಾರ ನಿರ್ಣಾಯಕ ಎಂದು ತಜ್ಞರು ಎಚ್ಚರಿಸಿದ್ದಾರೆ.
ನಿತ್ಯ 30-40 ಸಾವಿರ ಸೋಂಕಿತರು ಪತ್ತೆಯಾಗಲಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಚೈನ್ ಲಿಂಕ್ ಬ್ರೇಕ್ ಮಾಡಲು ಫೆಬ್ರವರಿಯಲ್ಲಿ ಒಂದು ವಾರ ಲಾಕ್ಡೌನ್ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಈಗಾಗಲೇ ನೈಟ್ ಕರ್ಫ್ಯೂ, ವಿಕೇಂಡ್ ಕರ್ಫ್ಯೂ ಜಾರಿಯಲ್ಲಿದ್ದು ನಿತ್ಯ 9 ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಸದ್ಯ ಲಾಕ್ಡೌನ್ ಕುರಿತು ತಜ್ಞರು ಹಾಗೂ ಅಧಿಕಾರಿಗಳು ಪೂರ್ವಭಾವಿ ಚರ್ಚೆ ನಡೆಸಿದ್ದಾರೆ.
ಕೊರೊನಾ ಕೈಮೀರಿದಾಗ ಸಿಎಂ ಹಾಗೂ ಸಚಿವರಿಂದ ಅಂತಿಮವಾಗಿ ನಿರ್ಧಾರ ಮಾಡಲಿದ್ದಾರೆ. ಸದ್ಯ ಈಗ ಲಾಕ್ಡೌನ್ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಮಾಡಿಲ್ಲ.