ಭೀಕರ ಅಪಘಾತ! ಕಾರು ಡಿಕ್ಕಿಯಿಂದ ಮೂವರ ದುರ್ಮರಣ

ಮಂಗಳವಾರ, 25 ಅಕ್ಟೋಬರ್ 2022 (08:41 IST)
ಚಿತ್ರದುರ್ಗ : ಇಲ್ಲಿನ ಪ್ರವಾಸಿ ಮಂದಿರ ಬಳಿ ರೋಡ್ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಈ ಭೀಕರ ಅಪಘಾತ ನಿನ್ನೆ ತಡರಾತ್ರಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಈವರೆಗೆ ಮೃತರ ಗುರುತು ಪತ್ತೆ ಆಗಿಲ್ಲ. ಗಾಯಾಳುಗಳಿಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ