ನೆಲಮಂಗಲದಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿ ದುರ್ಮರಣ

Sampriya

ಶನಿವಾರ, 21 ಡಿಸೆಂಬರ್ 2024 (13:45 IST)
ಬೆಂಗಳೂರು: ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ  ಸಂಭವಿಸಿದ ಭೀಕರ ಅಪಘಾತದಲ್ಲಿ 6ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರಿನ ಮೇಲೆ ಕಂಟೇನರ್‌ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ.

ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದಾರೆ.

ಕಂಟೇನರ್‌ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರೊಳಗಿದ್ದ ಎಲ್ಲಾ ಪ್ರಯಾಣಿಕರ ದೇಹಗಳು ಛಿದ್ರಛಿದ್ರವಾಗಿದೆ. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್‌ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ