ಬೆಂಗಳೂರು: ದೇಶದಲ್ಲಿ ಸಂಚಲನ ಮೂಡಿಸಿರುವ ಹಾಸನ ಸಂಸದರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದರುರಾಗಿದೆ.
ಇದೀಗ ಮತ್ತೋರ್ವ ಸಂತ್ರಸ್ತೆ ಅಪರಾಧ ತನಿಖಾ ಇಲಾಖೆಗೆ ದೂರು ನೀಡಿದ್ದು, ಈ ಸಂಬಂಧ ಇದೀಗ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಎ1 ಆರೋಪಿಯಾಗಿದ್ದಾರೆ.
ಇನ್ನೂ ದೂರಿನಲ್ಲಿ ಮಹಿಳೆ ಬೆಚ್ಚಿಬೀಳಿಸುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ದೂರುದಾರೆ ಹಾಸನ ಜಿಲ್ಲೆಯಲ್ಲಿ ಜನಪ್ರತಿನಿಧಿಯಾಗಿದ್ದು, ಶಾಸಕರು ಹಾಗೂ ಸಂಸದರ ಬಳಿ ಕ್ಷೇತ್ರದ ಅಭಿವೃದ್ಧಿ ಕೆಲಸದ ಬಗ್ಗೆ ಚರ್ಚಿಸಲು ಸಂಸದ ಪ್ರಜ್ವಲ್ ಭೇಟಿಯಾಗಲು ಹೋಗಿದ್ದಾರೆ. ಮೊದಲ ದಿನ ಭೇಟಿಯಾಗದ ಕಾರಣ, ಮರುದಿನ ಹಾಸನದ ಎಂಪಿ ನಿವಾಸಕ್ಕೆ ಪ್ರಜ್ವಲ್ ರೇವಣ್ಣ ಕರೆಸಿಕೊಂಡಿದ್ದಾರೆ. ನೆಲ ಮಹಡಿಯಲ್ಲಿ ಹೆಚ್ಚಿನ ಜನ ಇದ್ದರಿಂದ ಮೇಲ್ಮಹಡಿಯಲ್ಲಿ ಕಾಯುವಂತೆ ಹೇಳಿದ್ದಾರೆ. ಮೇಲ್ಮಹಡಿಯಲ್ಲಿ ಇನ್ನೂ ಕೆಲ ಮಹಿಳೆಯರಿಂದು ಅವರ ಜತೆ ಕಾದು ಕುಳಿತುಕೊಳ್ಳಿ ಎಂದಿದ್ದಾರೆ.
ಸ್ವಲ್ಪ ಹೊತ್ತು ಬಿಟ್ಟು ಬಂದ ಪ್ರಜ್ವಲ್ ರೇವಣ್ಣ ಮೊದಲು ಬಂದಿದ್ದ ಮಹಿಳೆಯನ್ನು ಮತಾನಾಡಿಸಿ ಕಳುಹಿಸಿದ್ದಾನೆ. ನಂತರ ನನ್ನನ್ನು ಕೋಣೆಯೊಳಗೆ ಕರೆದು ಬಾಗಿಲು ಹಾಕಿ ಕೈ ಹಿಡಿದು ಎಳೆದು ಮೈಮೇಲೆ ಎಳೆದುಕೊಂಡರು. ಜೋರಾಗಿ ಕೂಗುವುದಾಗಿ ಹೇಳಿದ್ದಕ್ಕೆ ಗನ್ ಇಟ್ಟು ಬೆದರಿಸಿದ್ದಾರೆ. ಅದಲ್ಲದೆ ನಿನ್ನ ಗಂಡನಿಂದ ನನ್ನ ತಾಯಿಯ ಎಂಎಲ್ಎ ಟಿಕೆಟ್ ತಪ್ಪಿದೆ. ಅವನು ಜಾಸ್ತಿ ಮಾತಾಡುತ್ತಾನೆ ಸುಮ್ಮನೆ ಇರಲು ಹೇಳು ಎಂದು ಬೆದರಿಕೆ ಹಾಕಿದ್ದಾನೆ. ನನ್ನ ಮೇಲೆ ಅತ್ಯಾಚಾರ ಎಸಗಿದ ವಿಡಿಯೋ ಕಳುಹಿಸಿ ಪದೇ ಪದೇ ಸಹಕರಿಸುವಂತೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಏ.28ರಂದು ಸಂದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧ ಮಾಜಿ ಮನೆ ಕೆಲಸದಾಕೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ನೀಡಿದ್ದರು. ಇದರ ಬೆನ್ನಲ್ಲೇ ಹಾಸನ ಮೂಲದ ಮಹಿಳೆ ಪ್ರಜ್ವಲ್ ರೇವಣ್ಣ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಎಸ್ಐಟಿಗೆ ಹೇಳಿಕೆ ನೀಡಿದ್ದರು. ಎಸ್ಐಟಿ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದೆ.ಇದರ ಬೆನ್ನಲೇ ಇದೀಗ ಸಂತ್ರಸ್ತೆ ಪತಿ ಸಿಐಡಿಗೆ ದೂರು ನೀಡಿದ್ದು, ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಜಾಸ್ತಿಯಾಗಿದೆ.