ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಬಂಧನ; ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ತಾಲಿಬ್ ಹುಸೇನ್ ನನ್ನು ಬಂಧಿಸಲಾಗಿದ್ದು, ಹಲವಾರು ಮಹತ್ವದ ಮಾಹಿತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ.
ಜಮ್ಮು ಕಾಶ್ಮೀರ ಪೊಲೀಸರು ಬೆಂಗಳೂರಿನ ಶ್ರೀರಾಮಪುರದಲ್ಲಿ ತಾಲಿಬ್ ಹುಸೇನ್ ನನ್ನು ಬಂಧಿಸಿದ್ದು, ಕಳೆದ 6 ವರ್ಷದ ಹಿಂದೆ ಹಿಜ್ಬುಲ್ ಸಂಘಟನೆಯ ಕಾರ್ಯಕರ್ತನಾಗಿದ್ದ. ಹಿಜ್ಬುಲ್ ಸಂಘಟನೆಯ ಕೈವಾಡವಿದೆ ಎನ್ನಲಾಗಿದೆ.
ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪೊಲೀಸರ ಸಹಾಯ ಪಡೆದ ಜಮ್ಮು – ಕಾಶ್ಮೀರದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಬಗ್ಗೆ ಜಮ್ಮು- ಕಾಶ್ಮೀರದ ಐಜಿಪಿ ಅವರು ಹಿಜ್ಬುಲ್ ಸಂಘಟನೆಯಲ್ಲಿ ಇರುವುದನ್ನು ಸ್ಪಷ್ಟನೆ ನೀಡಿದ್ದಾರೆ.
ಜಮ್ಮು ಕಾಶ್ಮೀರದ ನಿವಾಸಿಯಾಗಿದ್ದ ಶಂಕಿತ ಉಗ್ರ ತಾಲಿಬ್ ಹುಸೇನ್ ಕಳೆದ 6 ವರ್ಷಗಳಿಂದ ಬೆಂಗಳೂರಿನ ಶ್ರೀರಾಮಪುರ ಮಸೀದಿ ಬಳಿ ವಾಸವಾಗಿದ್ದ. ಈತನಿಗೆ ನಿಷೇಧಿತ ಉಗ್ರ ಸಂಘಟನೆಯೊಂದಿಗೆ ಲಿಂಕ್ ಇರುವ ಹಿನ್ನೆಲೆಯಲ್ಲಿ ಜಮ್ಮು ಪೊಲೀಸರ ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ನಡೆಸಿ ತಾಲಿಬ್ ಹುಸೇನ್‍ನನ್ನು ಕಳೆದ ಭಾನುವಾರ ಬಂಧಿಸಿದ್ದರು. ಆ ವೇಳೆ ಹುಸೇನ್ ನಗರದಲ್ಲಿ ಲೋಡಿಂಗ್ ಅನ್ ಲೋಡಿಂಗ್ ಕೆಲಸ ಮಾಡುತ್ತಿದ್ದಾಗಿ ಹೇಳಿಕೊಂಡಿದ್ದ.