ಮತ್ತೆ ಮುನ್ನೆಲೆಗೆ ಬಂದ ಪಠ್ಯ ಪರಿಷ್ಕರಣೆ

ಮಂಗಳವಾರ, 30 ಮೇ 2023 (20:54 IST)
ಮತ್ತೊಮ್ಮೆ ಪಠ್ಯ ಪರಿಷ್ಕರಣೆ ವಿಷಯವು ಮುನ್ನೆಲೆಗೆ ಬಂದಿದ್ದು ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದಂತೆ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ಇನ್ನು ನಾಳೆ ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪಠ್ಯಪುರಿಷ್ಕರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದರು . ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ರೋಹಿತ್ ಚಕ್ರತಿರ್ಥ್ ನೇತೃತ್ವದಲ್ಲಿ ಪಠ್ಯ ಪರಿಷ್ಕರಣೆ ಮಾಡಿತ್ತು. ಆದರೆ ಈ ಪಠ್ಯ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ವಿರೋಧ  ವ್ಯಕ್ತಪಡಿಸಿತ್ತು , ಆದರೆ ಇವಾಗ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ  ಮತ್ತೆ ಪಠ್ಯ ಪರಿಷ್ಕರಣೆ ಆಗುತ್ತಾ ಎಂಬ ಪ್ರಶ್ನೆ ಉದ್ಬವಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖವಾದ ಇರುವಂತೆ ಪಠ್ಯ ಪರಿಷ್ಕರಣೆ ಮಾಡುತ್ತೇವೆ ಎಂಬುದಕ್ಕೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರು ಪ್ರತಿಕ್ರಿಯೆ ನೀಡಿದರು. ಸಿಎಂ ನೇತೃತ್ವದಲ್ಲಿ ಸಭೆ ನಡೆಸಿ ಒಂದು ಕಮಿಟಿ ರಚಿಸುತ್ತೇವೆ ಅಗತ್ಯವಿದ್ದರೆ ಪಠ್ಯ ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿದರು.ಇನ್ನು ಈಗಾಗ್ಲೇ ಖಾಸಗಿ ಶಾಲೆ ಒಕ್ಕೂಟವು ಸಹ ಸರ್ಕಾರಕ್ಕೆ ಹಳೆಯ ಪಠ್ಯ ಮುಂದುವರೆಸುವಂತೆ ಮನವಿ ಮಾಡಿಕೊಂಡಿದ್ದರು. ಹಾಗೂ ಸಾಹಿತಿಗಳು ಸಹ ಕಳೆದ  ವರ್ಷ ಪಠ್ಯ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿದ್ದರು. ಇಗಾ ಖಾಸಗಿ ಶಾಲೆ ಹಾಗೂ ಸಾಹಿತಿಗಳು ಮನವಿ ಬೆನ್ನಲ್ಲೇ ಪಠ್ಯ ಪರಿಷ್ಕರಣೆಗೆ ಸಿದ್ರಾಮಯ್ಯ ಸರ್ಕಾರ ಮುಂದಾಗಿದೆ.

ಇನ್ನು ಕಳೆದ ಭಾರೀ ಆರ್ ಎಸ್ ಎಸ್ ಸಂಸ್ಥಾಪಕ ಹೆಡ್ಗೆವಾರ್ ಚಕ್ರವರ್ತಿ ಸೂಲಿಬೆಲೆ ಪಠ್ಯ ಸೇರಿಸಲಾಗಿತ್ತು. ಹಾಗೂ ವೀರ್ ಸಾವರ್ಕರ್‌ ಅವರ ಜೀವನ ಚರಿತ್ರೆಯನ್ನು ಸಹ ಪಠ್ಯಯಲ್ಲಿ ಸೇರಿಸಲಾಗಿತ್ತು, ವೀರ್ ಸಾವರ್ಕರ್‌ ಪಠ್ಯ ಪುಸ್ತಕದಲ್ಲಿ ಸೇರಿಸಿದರಿಂದ  ಹಲವು ಧರ್ಮ ಧಂಗಲ್‌ಗೆ ಕಾರಣವಾಗಿತ್ತು. ಹೀಗಾಗಿ ಮಕ್ಕಳ ಭವಿಷ್ಯಕ್ಕೆ ಅವಶ್ಯಕ ಇರುವ ಪಠ್ಯ ಪರಿಷ್ಕರಣೆ ಮಾಡಲು ಸರ್ಕಾರ ಸಜ್ಜಾಗಿದೆ. ಇನ್ನು ನಾಳೆಯಿಂದ ರಾಜ್ಯಾದ್ಯಂತ ಅಧಿಕೃತವಾಗಿ ಶಾಲೆಗಳು ಪ್ರಾರಂಭವಾಗಲಿದ್ದು ಈಗಾಗಲೇ ಬಹುತೇಕ ಪಠ್ಯಪುಸ್ತಕಗಳು ಪ್ರಿಂಟಾಗಿ ಶಾಲೆಯನ್ನು ತಲುಪಿದೆ ಹೀಗಾಗಿ ಮಕ್ಕಳಿಗೆ ತೊಂದರೆಯಾಗದಂತೆ ನಾವು ಈ ಬಾರಿ ಪಠ್ಯಪುಸ್ತಕವನ್ನು ಪರಿಷ್ಕರಣೆ ಮಾಡಿ ವಿತರಿಸುತ್ತೇವೆ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.ಒಟ್ಟಾರೆಯಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಪಠ್ಯ ಪರಿಷ್ಕರಣೆ ಮಾಡಲು ಹೊರಟಿದೆ. ಸರ್ಕಾರವು ಮಕ್ಕಳಿಗೆ ಯಾವುದೇ ರೀತಿ ತೊಂದರೆ ಆಗದಂತೆ ಪಠ್ಯಪುರಿಷ್ಕರಣೆ ಮಾಡಿ ಈ ಗೊಂದಲಕ್ಕೆ ಇಂತಿ ಶ್ರೀ ಹಾಡಬೇಕಾಗಿದೆ ಹಾಗೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಕಡೆ ಗಮನಹರಿಸಬೇಕಾಗಿದೆ. 
 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ