ಬಿಎಸ್‌ವೈ ನಿವಾಸದಲ್ಲಿ ಮಧ್ಯರಾತ್ರಿ ತಲಾಶ್ ಸರಿಯಲ್ಲ: ಶೆಟ್ಟರ್ ಕಿಡಿ

ಸೋಮವಾರ, 17 ಜುಲೈ 2017 (12:55 IST)
ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಕುರಿತಂತೆ ಆರೋಪಿ ಸಂತೋಷ್‌‌ನನ್ನು ಹುಡುಕಲು ಪೊಲೀಸರು ಮಧ್ಯರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ತೆರಳಿರುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಯಡಿಯೂರಪ್ಪ ಜವಾಬ್ದಾರಿಯುತ ಸ್ಥಾನದಲ್ಲಿರುವವರು. ಪೊಲೀಸರು ಬೇಕಿದ್ದರೆ ಅವರನ್ನು ಕೇಳಬೇಕಿತ್ತು. ಇಲ್ಲವಾದ್ರೆ ಹಗಲಲ್ಲಿ ಮನೆಗೆ ಹೋಗಿ ತಲಾಶ್ ನಡೆಸಬೇಕಾಗಿತ್ತು ಎಂದರು.
 
ಮಹಾಲಕ್ಷ್ಮಿ ಲೇಔಟ್ ಪೊಲೀಸರು ಮಧ್ಯ ರಾತ್ರಿ ಯಡಿಯೂರಪ್ಪ ಅವರ ಮನೆಗೆ ಹೋಗಿರುವ ಹಿಂದೆ ರಾಜಕೀಯ ದುರುದ್ದೇಶ ಅಡಗಿರುವ ಸಾಧ್ಯತೆಗಳಿವೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
 
ಮಹಾಲಕ್ಷ್ಮಿ ಪೊಲೀಸ್ ಠಾಣೆಯ ಎಸಿಪಿ ಬಡಿಗೇರ್ ನೇತೃತ್ವದ ತಂಡ ಯಡಿಯೂರಪ್ಪ ಅವರ ನಿವಾಸಕ್ಕೆ ಮಧ್ಯರಾತ್ರಿ ತೆರಳಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ