ಸಸ್ಯಕಾಶಿ ಲಾಲ್ ಬಾಗ್ ನಲ್ಲೇ ಇನ್ಮುಂದೆ ಮಿನಿ ಪಶ್ಚಿಮ ಘಟ್ಟ ಸೊಬಗು

ಬುಧವಾರ, 9 ಆಗಸ್ಟ್ 2023 (20:21 IST)
ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆಯುವ ಫ್ಲವರ್ ‍ಷೋ ನೋಡಲು ದೇಶದ ನಾನಾ ಭಾಗಗಳಿಂದ ಜನರು ವಿಸಿಟ್ ಮಾಡ್ತಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಲಾಲ್‌ಬಾಗ್‌ ಬೊಟಾನಿಕಲ್‌ ಗಾರ್ಡನ್‌ ವೇರಾಯಿಟಿ ಹೂವು ಹಾಗು ಸಸ್ಯಗಳಿಂದ ರೆಡಿಯಾಗಿದೆ. ಅಷ್ಟೇ ಅಲ್ಲದೇ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್ ಶೀಘ್ರದಲ್ಲೇ ಮಿನಿ ಪಶ್ಚಿಮ ಘಟ್ಟ ನಿರ್ಮಾಣವಾಗ್ತಾಯಿದೆ. 6 ಎಕರೆ ಬಂಜರು ಭೂಮಿಯಲ್ಲಿ ಸಹ್ಯಾದ್ರಿ ಪ್ರದೇಶದಲ್ಲಿ ಬೆಳೆಯುವ ವಿವಿಧ ಜಾತಿಯ ಮರಗಳನ್ನು ಬೆಳೆಯಲು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಲಾಲ್ ಬಾಗ್ ಗೆ ದಿನನಿತ್ಯ ಸಾಕಷ್ಟು ಜನರು ಬರ್ತಾರೆ. ಲಾಲಬಾಗ್ ನ್ನು ಇನ್ನಷ್ಟು ಅಟ್ರ್ಯಾಕ್ಟಿವ್ ಮಾಡೋಕೆ ತೋಟಗಾರಿಕೆ ಪ್ಲಾನ್ ಮಾಡ್ತಾ ಇದ್ದು, ಎರಡು ವರ್ಷಗಳ ಹಿಂದೆ ಸಹ್ಯಾದ್ರಿ ಪ್ರದೇಶದಿಂದ 190 ಕ್ಕೂ ಹೆಚ್ಚು ಜಾತಿಯ ಸಸಿಗಳನ್ನು ತರಿಸಿ ನೆಡಲಾಗಿದೆ, ಅದರಲ್ಲಿ ಕೆಲವು ಹಣ್ಣಿನ ಗಿಡಗಳು ಸೇರಿದಂತೆ 132 ಗಿಡಗಳು ಉಳಿದುಕೊಂಡಿವೆ. ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಪಶ್ಚಿಮ ಘಟ್ಟಗಳ 400 ಕ್ಕೂ ಹೆಚ್ಚು ಜಾತಿಯ ಗಿಡಗಳನ್ನು ಲಾಲ್‍ಬಾಗ್‍ನಲ್ಲಿ ನೆಡಲಾಗಿದೆ.

ಇನ್ನು ತೋಟಗಾರಿಕೆ ಇಲಾಖೆ ಸಿಬ್ಬಂದಿ ಮಣ್ಣಿನ ಫಲವತ್ತತೆ ಕುರಿತು ಕೆಲಸ ಮಾಡುತ್ತಿದ್ದು,  ಸಹ್ಯಾದ್ರಿ ಬೆಟ್ಟದಿಂದ ತರಿಸಿದ್ದ 400 ಸಸಿಗಳನ್ನು ವಿದ್ಯಾರ್ಥಿ ಸ್ವಯಂಸೇವಕರ ನೆರವಿನಿಂದ ನೆಡಲಾಗಿದೆ. ಮುಂದಿನ ದಿನಗಳಲ್ಲಿ ಪಶ್ಚಿಮ ಘಟ್ಟದ ಪೊದೆಗಳು, ಗಿಡಮೂಲಿಕೆಗಳ ಸಸ್ಯಗಳನ್ನು ಸೇರಿಸಲಾಗುವುದು ಎಂದು ತೋಟಗಾರಿಕಾ ಇಲಾಖೆ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ