ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗಾಗಿ ಶ್ರಮಿಸಿದವರಿಗೆ ಮಾಡಿದ್ದೇನು?
ಶನಿವಾರ, 8 ಫೆಬ್ರವರಿ 2020 (20:06 IST)
ಕಲಬುರಗಿ ನುಡಿ ಸಮ್ಮೇಳನಕ್ಕೆ ಕಳೆದ ಒಂದು ತಿಂಗಳಿನಿಂದ ಕನ್ನಡದ ಕಟ್ಟಾಳುಗಳಾಗಿ ದುಡಿದು ಐತಿಹಾಸಿಕ ಯಶಸ್ವಿ ಸಮ್ಮೇಳನದಲ್ಲಿ ಭಾಗಿಯಾದವರಿಗೆ ವಿಶೇಷ ರೀತಿಯಲ್ಲಿ ಧನ್ಯವಾದ ಅರ್ಪಣೆ ಮಾಡಲಾಗಿದೆ.
ಸಮ್ಮೇಳನದ ವಿವಿಧ ಸಮಿತಿಗಳ ಅಧ್ಯಕ್ಷರುಗಳಾದ ಚುನಾಯಿತ ಜನಪ್ರತಿನಿಧಿಗಳಿಗೆ, ಕಾರ್ಯಾಧ್ಯಕ್ಷರು ಸೇರಿದಂತೆ ಸಮ್ಮೇಳನ ಯಶಸ್ವಿಗೆ ತಮ್ಮದೇ ಸಹಕಾರ, ದೇಣಿಗೆ, ಕೊಡುಗೆ ನೀಡಿದ ಪ್ರತಿಯೊಬ್ಬರಿಗೆ ಕಲಬುರಗಿ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಶರತ್ ಬಿ. ಧನ್ಯವಾದ ಅರ್ಪಿಸಿದರು.
ಗುಲಬರ್ಗಾ ವಿಶ್ವವಿದ್ಯಾಲಯ ಆವರಣದ ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ಆಲಂಕಾರ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಮಹಿಳಾ ಸಮಿತಿಯ ಅಧ್ಯಕ್ಷರಾದ ಕಲಬುರಗಿ ಉತ್ತರ ಶಾಸಕಿ ಕನೀಸ್ ಫಾತಿಮಾ, ನೊಂದಣಿ ಸಮಿತಿಯ ಅಧ್ಯಕ್ಷರಾದ ವಿಧಾನ ಪರಿಷತ್ತಿನ ಶಾಸಕ ತಿಪ್ಪಣಪ್ಪ ಕಮಕನೂರ, ಪ್ರಚಾರ ಸಮಿತಿಯ ಅಧ್ಯಕ್ಷರಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ, ವೇದಿಕೆ ಸಮಿತಿ ಕಾರ್ಯಧ್ಯಕ್ಷರಾದ ಕಲಬುರಗಿ ನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಸಾರಿಗೆ ಮತ್ತು ವಸತಿ ಸಮಿತಿಯ ಕಾರ್ಯಧ್ಯಕ್ಷರಾದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಮೆರವಣಿಗೆ ಸಮಿತಿ ಕಾರ್ಯಧ್ಯಕ್ಷರಾದ ಡಿಸಿಪಿ ಕಿಶೊರ ಬಾಬು, ಐ.ಎ.ಎಸ್. ಪ್ರೊಬೇಷನರಿ ಅಧಿಕಾರಿ ಗೋಪಾಲಕೃಷ್ಣ ಬಿ., ಎನ್.ಇ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಜಹೀರಾ ನಸ್ಸಿಂ, ಸಾಂಸ್ಕೃತಿಕ ಸಮಿತಿ ಕಾರ್ಯಧ್ಯಕ್ಷರಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ.ವಾನತಿ ಸೇರಿದಂತೆ ಇತರೆ ಸಮಿತಿಯ ಕಾರ್ಯಧ್ಯಕ್ಷರುಗಳಿಗೆ ಸತ್ಕರಿಸಲಾಯಿಸಿತು.