ಮಹಿಳಾ ಟೆಕ್ಕಿಯ ಬಟ್ಟೆ ಹರಿದ ಆರೋಪಿಗಳು ಅಂದರ್
ಕ್ಷುಲ್ಲಕ ಕಾರಣಕ್ಕೆ ಮಹಿಳಾ ಟೆಕ್ಕಿಯ ಕೆನ್ನೆಗೆ ಹೊಡೆದು ಆಕೆಯ ಬಟ್ಟೆಯನ್ನು ಹರಿದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ರಸ್ತೆ ನಡುವೆ ಕಾರನ್ನು ನಿಲ್ಲಿಸಿಕೊಂಡು ಟ್ರಾಫಿಕ್ ಮಾಡಿದ್ದ ಆರೋಪಿಗಳು, ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಮಹಿಳಾ ಸಾಫ್ಟವೇರ್ ಇಂಜಿನಿಯರ್ ಒಬ್ಬಳ ಕೆನ್ನೆಗೆ ಹೊಡೆದಿದ್ದರು. ಅಷ್ಟೇ ಅಲ್ಲ ಆಕೆಯ ಬಟ್ಟೆ ಹರಿದು ಅವಮಾನ ಮಾಡಿದ್ದರು.
ಘಟನೆಗೆ ಸಂಬಂಧಿಸಿದಂತೆ ಮಂಜುನಾಥ್ ಹಾಗೂ ಆತನ ಗೆಳೆಯ ಮಧು ಎಂಬಾತರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಕುರಿತು ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.