ಕಾಂಗ್ರೆಸ್ - ಜೆಡಿಎಸ್ ಮಾಡಿಕೊಂಡ ಮೈತ್ರಿ ಸರ್ಕಾರ ಪಾಪದ ಕೊಡ ತುಂಬಿದ ನಂತರ ಬಿದ್ದು ಹೋಗಿದೆ.
ಅಕ್ಕ-ಪಕ್ಕ ಕೂಡುತಿದ್ದ ಸಿದ್ದರಾಮಯ್ಯ, ಕುಮಾರಸ್ವಾಮಿ ಪರಸ್ಪರ ಕಿತ್ತಾಟ ನಡೆಸಿದ್ದಾರೆಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದರು.
ಪದವೀಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರತಿಪಕ್ಷಗಳಲ್ಲಿ ಒಗ್ಗಟ್ಟು ಇಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುರಿದ ನಂತರ ತಾವು ತಾವೇ ಜಗಳ ಮಾಡುತ್ತಿದ್ದಾರೆ. ಜೆಡಿಎಸ್ ಶಾಸಕರು ಜೆಡಿಎಸ್ ಪಕ್ಷ ಬಿಟ್ಟು ಹೊರಗೆ ಬರುತ್ತೇವೆ ಎಂದು ಹೇಳುತ್ತಿದ್ದಾರೆ.
ಇದರ ಲಾಭವನ್ನು ಬಿಜೆಪಿ ಪಡೆದು ಪದವೀಧರ ಚುನಾವಣೆಯನ್ನು ಗೆಲ್ಲಬೇಕು. ಈ ಹಿನ್ನಲೆಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ವಿಚಾರದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಎಲ್ಲರ ಜೊತೆಗೆ ಸಮಾಲೋಚನೆ ನಡೆಸಲಾಗುವುದು ಎಂದ್ರು.
ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರವಿದ್ದು, ಪ್ರತಿಪಕ್ಷಗಳ ಜಗಳದ ಲಾಭ ಪಡೆದು ಚುನಾವಣೆ ಗೆಲ್ಲುವ ರಣತಂತ್ರ ರೂಪಿಸಲಾಗುವುದು. ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಕಾಂಗ್ರೆಸ್ ನಾಯಕರುಗಳೇ ಕಾಂಗ್ರೆಸ್ ಆಡಳಿತ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಒಗ್ಗಟ್ಟಿನಲ್ಲಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ದೇಶ ಕಾಂಗ್ರೆಸ್ ಮುಕ್ತವಾಗೋದು ಗ್ಯಾರಂಟಿ ಎಂದ್ರು.