ಮದುವೆಯಾಗದೇ ಕೈಕೊಟ್ಟ ಉಪನ್ಯಾಸಕನ ಬಂಧನ

ಸೋಮವಾರ, 10 ಸೆಪ್ಟಂಬರ್ 2018 (17:42 IST)
ಯುವತಿಯೊಬ್ಬಳನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನ್ಯಾಸಕನೊಬ್ಬನನ್ನು ಬಂಧನ ಮಾಡಲಾಗಿದೆ.

ಬೆಂಗಳೂರಿನ ಕಾಲೇಜೊಂದರಲ್ಲಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿರುವ ಅಂತರೀಶ್ ರಮೇಶ್ ಕೋಟೆ (31) ಎಂಬಾತನನ್ನು ಕಲಬುರಗಿ ನಗರದ ಚೌಕ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಉಪನ್ಯಾಸಕನನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಯುವತಿ ಸೆ. 1 ರಂದು ದೂರು ದಾಖಲಿಸಿದ್ದಳು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಉಪನ್ಯಾಸಕ ಅಂತರೀಶ್ ನನ್ನು ಬಂಧಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ