ಪ್ರತಿಭಟನೆ ನಡೆಸುತ್ತಿದ್ದ ರೈತರ ಬಂಧನ, ಬಿಡುಗಡೆ
ರೈತರಿಗೆ ಅರೆಸ್ಟ್ ವಾರೆಂಟ್ ನೀಡಲು ಕಾರಣರಾದ ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಭಟಿಸಿದ ಅನ್ನದಾತರನ್ನೇ ಬಂಧಿಸಿದ ಘಟನೆ ನಡೆದಿದೆ.
ಚಾಮರಾಜನಗರ ತಾಲೂಕಿನ ವಿ.ಸಿ.ಹೊಸೂರು ಗ್ರಾಮದ ಉಮಾಪತಿ ಎಂಬುವರು ಚಾಮರಾಜನಗರ ಶಾಖೆ ಆಕ್ಸಿಸ್ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದರು. ಆಧಾರವಾಗಿ ಖಾಲಿ ಚೆಕ್ ನೀಡಿದ್ದರು. ಆದರೆ ಕಲ್ಕತ್ತಾದಿಂದ ಚೆಕ್ ಬೌನ್ಸ್ ಕಾರಣಕ್ಕೆ ಅರೆಸ್ಟ್ ವಾರೆಂಟ್ ಬಂದಿತ್ತು.
ಇದನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು, ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿ, ರೈತರಿಗೆ ನೋಟಿಸ್ ಅಥವಾ ಅರೆಸ್ಟ್ ವಾರೆಂಟ್ ನೀಡಲು ಯಾವುದೇ ಬ್ಯಾಂಕ್ ಕಾರಣವಾದ್ರೆ ಅವರನ್ನು ಬಂಧಿಸುವಂತೆ ಸಿಎಂ ಕುಮಾರಸ್ವಾಮಿ ಮೌಖಿಕವಾಗಿ ಹೇಳಿದ್ದಾರೆ. ಅದರಂತೆ ಬ್ಯಾಂಕ್ ಅಧಿಕಾರಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬ್ಯಾಂಕ್ ಮುಂದೆ ಪ್ರತಿಭಟಿಸುತ್ತಿದ್ರು.
ಈ ವೇಳೆ ಪ್ರತಿಭಟನಾ ನಿರತ ರೈತರನ್ನು ಪೊಲೀಸರು ಬಂಧಿಸಿದ್ರು. ಪೊಲೀಸರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ರು.