ರಂಗಸ್ಥಳದಲ್ಲೇ ಕಲಾವಿದ ಸಾವು

ಭಾನುವಾರ, 8 ಜನವರಿ 2023 (17:15 IST)
ರಂಗಸ್ಥಳದಲ್ಲೇ ಕುಸಿದು ಬಿದ್ದು ಕಲಾವಿದ ನಂಜಯ್ಯ ಎಂಬುವವರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಡೆದ ನಾಟಕದ ವೇಳೆ ಈ ಘಟನೆ ನಡೆದಿದೆ. ಕುರುಕ್ಷೇತ್ರದ ಕೃಷ್ಣ ಸಂಧಾನ ನಾಟಕ ಪ್ರದರ್ಶನದಲ್ಲಿ ಸಾರ್ಥಕಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ನಂಜಯ್ಯ ವೇದಿಕೆಯ ಮೇಲೆಯೇ ಉಸಿರುಚೆಲ್ಲಿದ್ದಾರೆ. ಘಟನೆ ಬಳಿಕ ಸಹಕಲಾವಿದರು ಕಾರ್ಯಕ್ರಮ ಅರ್ಧಕ್ಕೆ ಮೊಟಕುಗೊಳಿಸಿದರು. ಮಳವಳ್ಳಿ ತಾಲೂಕಿನ ವಿವಿಧ ಗ್ರಾಮಗಳ ಕಲಾವಿದರು ಸೇರಿಕೊಂಡು ಪೌರಾಣಿಕ ನಾಟಕ ಆಯೋಜಿಸಿದ್ದರು. ಡ್ರಾಮಾ‌ಸೀನ್ಸ್ ಸೆಟ್​​ನಲ್ಲಿ ಕುರುಕ್ಷೇತ್ರ ಎಂಬ ಪೌರಾಣಿಕ ನಾಟಕದಲ್ಲಿ ಸೈಂಧವ ಮತ್ತು ಸಾರ್ಥಕಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚಿ ನಟನೆ ಮಾಡುವ ವೇಳೆ ವೇದಿಕೆಯಲ್ಲೇ ಹೃದಯಾಘಾತ ಸಂಭವಿಸಿ ಕಲಾವಿದ ನಂಜಯ್ಯ ಪ್ರಾಣ ಬಿಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ