ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ; ರಾಜ್ಯದಲ್ಲಿ ಮತ್ತೆ ಪ್ರವಾಹ ಭೀತಿ

ಗುರುವಾರ, 5 ಸೆಪ್ಟಂಬರ್ 2019 (11:46 IST)
ಬೆಳಗಾವಿ : ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕೊಯ್ನಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ರಾಜ್ಯದಲ್ಲಿ  ಮತ್ತೆ ಪ್ರವಾಹ ಭೀತಿ ಎದುರಾಗಿದೆ.ನಾಳೆಯಿಂದ ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡಲು ನಿರ್ಧಾರ ಮಾಡಲಾಗಿದ್ದು, ಇದರಿಂದ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗಿದೆ.

 

ಈ ಹಿನ್ನಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿ ಇರುವಂತೆಯೂ ಹಾಗೂ ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ ಮಾಡಲಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ