ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆ; ಬೆಂಗಳೂರಿನಲ್ಲಿ ಶುರುವಾಗಿದೆ ನಕಲಿ ಸ್ಯಾನಿಟೈಸರ್ ಹಾವಳಿ
ಶುಕ್ರವಾರ, 20 ಮಾರ್ಚ್ 2020 (10:37 IST)
ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ನಕಲಿ ಸ್ಯಾನಿಟೈಸರ್ ಹಾವಳಿ ಹೆಚ್ಚಾಗಿದೆ ಎಂಬುದಾಗಿ ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾದಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚೆಚ್ಚು ಸ್ಯಾನಿಟೈಸರ್ ಗಳನ್ನು ಬಳಸುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ದುರುಳರು ನಕಲಿ ಸ್ಯಾನಿಟೈಸರ್ ಗಳನ್ನು ತಯಾರಿ ಶುರು ಮಾಡಿದ್ದಾರೆ.
ಈ ಬಗ್ಗೆ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿದ್ದು ಒಟ್ಟು 50ಲಕ್ಷ ಮೌಲ್ಯದ ನಕಲಿ ಸ್ಯಾನಿಟೈಸರ್ ಜಪ್ತಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.