ಡಿ.ಕೆ.ಶಿವಕುಮಾರ್ ಬಂಧನದ ಹಿನ್ನಲೆ; ರಾಜ್ಯದ ಹಲವೆಡೆ ಬಂದ್ ಗೆ ಕರೆ

ಬುಧವಾರ, 4 ಸೆಪ್ಟಂಬರ್ 2019 (10:39 IST)
ಬೆಂಗಳೂರು : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಈಗಾಗಲೇ ರಾಮನಗರ ಜಿಲ್ಲೆಯ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು, ಶಿವಕುಮಾರ್ ಬೆಂಬಲಿಗರ ಪ್ರತಿಭಟನೆ ಮುಂದುವರೆದಿದ್ದು ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದೀಗ ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು –ಮೈಸೂರು ಹೆದ್ದಾರಿ ತಡೆದು, ಟೈರ್ ಗೆ ಬೆಂಕಿ ಹಚ್ಚಿ ಕಾರ್ಯಕರ್ತರ ಆಕ್ರೋಶ ವ್ತಕ್ತಪಡಿಸಿದ್ದಾರೆ. ಹಾಗೇ ಮಂಡ್ಯ ಜಿಲ್ಲೆಯಲ್ಲೂ ಪ್ರತಿಭಟನೆಯ ಕಾವು ಹೆಚ್ಚಾಗಿದ್ದು, ಜಿಲ್ಲೆಯ  ಮಳವಳ್ಳಿ ತಾಲೂಕಿನ ಹಲಗೂರು ಬಂದ್ ಗೆ ಕರೆ ನೀಡಲಾಗಿದೆ.


ಮೈಸೂರಿನಲ್ಲಿಯೂ ಡಿಕೆಶಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಮೈಸೂರಿನ ಬೋಗಾದಿ ರಿಂಗ್ ರಸ್ತೆ ಬಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕುಣಿಗಲ್ ನಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಬಂದ್ ಕರೆ ನೀಡಿದ್ದು, ಪಟ್ಟಣದ ಹುಚ್ಚ ಮಾಸ್ತಿಗೌಡ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ