ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ!

ಸೋಮವಾರ, 5 ಜೂನ್ 2023 (09:27 IST)
ಬೆಂಗಳೂರು : ಗಂಡನೇ ಹೆಂಡ್ತಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
 
ನಾಗರತ್ನ (32) ಕೊಲೆಯಾದ ಮಹಿಳೆ. ಪತಿ ಅಯ್ಯಪ್ಪ ಈ ಕೃತ್ಯ ಎಸಗಿದ್ದು, ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ. ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ.

ಅಪ್ಪ-ಅಮ್ಮ ಇಲ್ಲದೇ ಅನಾಥಾಶ್ರಮದಲ್ಲಿದ್ದ ನಾಗರತ್ನಳನ್ನು 12 ವರ್ಷಗಳ ಹಿಂದೆ ಅಯ್ಯಪ್ಪ ಮದುವೆಯಾಗಿದ್ದ. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಳು. ಅಯ್ಯಪ್ಪ, ತನ್ನ ಅಕ್ಕನ ಮನೆಯಲ್ಲಿ ಮಕ್ಕಳನ್ನು ಬಿಟ್ಟಿದ್ದ. ಇತ್ತೀಚೆಗೆ ಹೆಂಡತಿ ಮೇಲೆ ಅನುಮಾನ ಪಟ್ಟಿದ್ದ ಅಯ್ಯಪ್ಪ, ಮೂರು ದಿನಗಳಿಂದ ದಂಪತಿ ಮಧ್ಯೆ ಗಲಾಟೆ ನಡೆದಿತ್ತು. 

ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ