ಇಂದಿರಾ ಕ್ಯಾಂಟಿನ್ ಉದ್ಘಾಟನೆ ವೇಳೆ ಬಿಜೆಪಿ-ಕಾಂಗ್ರೆಸ್ ಮುಖಂಡರ ವಾಕ್ಸಮರ

ಶನಿವಾರ, 17 ನವೆಂಬರ್ 2018 (19:06 IST)
ಸಚಿವರು ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ವೇಳೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದ ಘಟನೆ ನಡೆದಿದೆ.

ಹುಬ್ಬಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ ನ್ನು ಸಚಿವ ಆರ್. ವಿ. ದೇಶಪಾಂಡೆ ಉದ್ಘಾಟಿಸಿದರು. ಉದ್ಘಾಟನೆ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ಪರಸ್ಪರ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಇಂದಿರಾ ಕ್ಯಾಂಟೀನ್ ನಡೆಸಲು ಮಹಾನಗರ ಪಾಲಿಕೆ 70 ರಷ್ಟು ಅನುದಾನ ನೀಡುವ ವಿಚಾರದಲ್ಲಿ ಅಸಮಾಧಾನ ವ್ಯಕ್ತವಾಗಿದೆ.
ಆರ್.ವಿ ದೇಶಪಾಂಡೆ- ಜಗದೀಶ್ ಶೆಟ್ಟರ್ ಪರಸ್ಪರ ಮಾತಿನ ಸಮರ ನಡೆಸಿದರು. ಕ್ಯಾಂಟೀನ್ ನಿರ್ವಹಣೆಗೆ ಸ್ಥಳೀಯ ಸಂಸ್ಥೆ ಅನುದಾನ ನೀಡಲು ಸಾಧ್ಯವಿಲ್ಲ. ಸರ್ಕಾರದ ಕಾರ್ಯಕ್ರಮಕ್ಕೆ ಅನುದಾನವನ್ನು ಸರ್ಕಾರ ನೀಡಲಿ ಎಂದು ಶೆಟ್ಟರ್ ಆಗ್ರಹ ಮಾಡಿದರು.

ಈಗಾಗಲೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ವಾರ್ಷಿಕ 13 ಕೋಟಿ ಭರಿಸಲು ಸಾಧ್ಯವಿಲ್ಲ. ಸರ್ಕಾರದ ಅನುದಾನ ನೀಡಿ ಕ್ಯಾಂಟಿನ್ ನಡೆಸಲಿ ಎಂದು ಶೆಟ್ಟರ್ ಒತ್ತಾಯಿಸಿದರು.

ಜಗದೀಶ್ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ದೇಶಪಾಂಡೆ, ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳು ನಿರ್ವಹಣಾ ವೆಚ್ಚ ಭರಿಸುತ್ತಿವೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ವಿಶೇಷ ಹೊರೆಯಾಗುವುದಿಲ್ಲ ಎಂದರು.  
ಮಾಧ್ಯಮಗಳ ಮೈಕ್ ಮುಂದೆ ಉಭಯ  ಪಕ್ಷಗಳ ನಾಯಕರ ಮಾತಿನ ಸಮರ ನಡೆಯಿತು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ