ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧವಿಲ್ಲ. ಹೀಗಂತ ಬಿಜೆಪಿ ಹಿರಿಯ ನಾಯಕ ಹೇಳಿಕೆ ನೀಡಿದ್ದಾರೆ.
ಡಿಸಿಎಂ ಪರಮೇಶ್ವರ್ ಜೀರೋ ಟ್ರಾಫಿಕ್ ವಿಚಾರಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದಾರೆ.
ಜೀರೋ ಟ್ರಾಫಿಕ್ ನಿಂದ ಹತ್ತು ಸಾವಿರ ಮತ ಕಡಿಮೆಯಾಗುತ್ತಿದೆ. ಇದು ಮಾಜಿ ಶಾಸಕ ಕೆ. ಎನ್. ರಾಜಣ್ಣ ಹೇಳಿರುವ ಮಾತು. ಅವರೇ ಹೇಳಿದ ಮೇಲೆ ನಾನು ಯಾವ ಪ್ರತಿಕ್ರಿಯೆ ನೀಡಲ್ಲ ಎಂದರು.
ಬಿಜೆಪಿ ಮಧ್ಯಂತರ ಚುನಾವಣೆಗೆ ಸಿದ್ಧವಿಲ್ಲ. ಒಂದು ವೇಳೆ ಚುನಾವಣೆ ನಡೆದರೆ 150 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ.
ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ಕಚ್ಚಾಟದಲ್ಲಿ ಮುಳುಗಿವೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದರು.
ನಾವು ಕೆಲಸ ಮಾಡ್ತೇವೆ, ಬಿಜೆಪಿಗೆ ವೋಟ್ ಹಾಕ್ತೀರಾ ಅಂತ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಹತಾಶೆಯಿಂದ ಹೇಳುತ್ತಿದ್ದಾರೆ.
ಅಹಿಂದ ಸಮಾವೇಶ ಮಾಡಲು ಸಿದ್ದರಾಮಯ್ಯ ಹೊರಟಿದ್ದಾರೆ. ಮಧ್ಯಂತರ ಚುನಾವಣೆ ಬರುತ್ತೆ ಅಂತಾ ದೇವೇಗೌಡರು ಹೇಳ್ತಾರೆ. ಸಮನ್ವಯದ ಕೊರತೆ ಇದೆ ಎಂಬುದಕ್ಕೆ ಇದಕ್ಕಿಂತ ನಿದರ್ಶನ ಬೇಕೇ? ಎಂದು ಕೇಳಿದ್ರು.