ಬಿಜೆಪಿಯದ್ದು ಐಸಿಸ್ ವರ್ತನೆ- ರಾಮಲಿಂಗಾರೆಡ್ಡಿ
ಮಾಧ್ಯಮದವರ ಜೊತೆ ಮಾತನಾಡಿ, ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಗಲಾಟೆಯಲ್ಲಿ ಸಂಸದ ಪ್ರತಾಪಸಿಂಹ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡಿದ್ದಕ್ಕೆ ಅವರನ್ನು ಬಂಧಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಕಾನೂನು ಉಲ್ಲಂಘನೆ ಮಾಡುವವರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದ ಅವರು, ಬಿಜೆಪಿಯವರು ಉಗ್ರ ಸಂಘಟನೆಗಳಂತೆ ವರ್ತನೆ ಮಾಡುವ ಮೂಲಕ ಶಾಂತಿ, ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದನ್ನೆ ಕೆಲಸವನ್ನಾಗಿಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.