ಉತ್ತರ ಕರ್ನಾಟಕಕ್ಕೆ ಅನ್ಯಾಯ: ಮತ್ತೆ ಧ್ವನಿ ಎತ್ತಿದ ಬಿಜೆಪಿ ಮುಖಂಡ

ಶುಕ್ರವಾರ, 24 ಆಗಸ್ಟ್ 2018 (16:37 IST)
ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮತ್ತೆ ಧ್ವನಿಯನ್ನು ಬಿಜೆಪಿ ಮುಖಂಡ ಎತ್ತಿದ್ದಾರೆ.


ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಬಂದಿದೆ, ಮುಂದೇಯು ಅನ್ಯಾಯ ಆಗಲಿದೆ. ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಗದಗನಲ್ಲಿ ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಮಡಿಕೇರಿ ನೆರೆಹಾವಳಿ ಘಟನೆ ಹಿನ್ನಲೆ ಸಿ.ಎಂ ಹಾಗೂ ಮಂತ್ರಿ ಮಂಡಲ ಮುಂಜಾಗ್ರತ ಕ್ರಮ ಕೈಗೊಳ್ಳಲಿಲ್ಲ.
ಸರ್ಕಾರ ಎಚ್ಚೆತ್ತುಕೊಂಡಿದ್ರೆ ಕೊಡಗು ಜನ್ರ ಪ್ರಾಣಹಾನಿ ತಡೆಯಬಹುದಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಪ್ರಾಣ ಹಾನಿ , ಪ್ರಾಣಿಗಳ ಹಾನಿ, ಆಸ್ತಿ-ಪಾಸ್ತಿ ಹಾನಿ ಸಂಭವಿಸಿದೆ. ಇಷ್ಟೆಲ್ಲಾ ಘಟನೆ ನಡೆದ್ರೂ ಸಿ.ಎಂ ತಡವಾಗಿ ಭೇಟಿ ನೀಡಿರುವುದು ದುರದೃಷ್ಟಕರ ಎಂದರು.

ಸಚಿವ ಎಚ್.ಡಿ ರೇವಣ್ಣ ಬಿಸ್ಕೇಟ್ ಎಸೆದ ರೀತಿ ಕುರಿತು ಪ್ರತಿಕ್ರಿಯಿಸಿದ್ದು, ಮಾಜಿ ಪ್ರಧಾನಿ ಮಕ್ಕಳಾದ ರೇವಣ್ಣಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಇರಬೇಕಿತ್ತು. ಸರ್ಕಾರ ಮತ್ತು ಸಚಿವ ಸ್ಥಾನ ಅಹಂಕಾರ ಅವರಲ್ಲಿ ತುಂಬಿಕೊಂಡಿದೆ.
ಇದು ಅಧಿಕಾರ ಅಹಂ ಬಹಳ ದಿನ ಉಳಿಯುವುದಿಲ್ಲ ಎಂದು ಟಾಂಗ್ ನೀಡಿದರು.  



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ