ತಲ್ವಾರ್ ಹಿಡಿದು ಫೋಟೊಕ್ಕೆ ಪೋಸ್ ಕೊಟ್ಟು ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ನಾಯಕರು

ಮಂಗಳವಾರ, 12 ಮಾರ್ಚ್ 2019 (13:06 IST)
ಧಾರವಾಡ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಪ್ರಹ್ಲಾದ್ ಜೋಶಿ ಮತ್ತು ಅರವಿಂದ ಬೆಲ್ಲದ ಕೈಯಲ್ಲಿ ತಲ್ವಾರ್ ಹಿಡಿದ ಫೋಟೋವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರೊಬ್ಬರು ತಮ್ಮ ಫೇಸ್‍ ಬುಕ್‍ ನಲ್ಲಿ ಪೋಸ್ಟ್ ಮಾಡಿ ಇದೀಗ ನೀತಿ ಸಂಹಿತೆ ನಿಯಮವನ್ನು ಉಲ್ಲಂಘಿಸಿದ್ದಾರೆ.


ಶಕ್ತಿ ಧಾರವಾಡ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಎರಡು ದಿನಗಳ ಹಿಂದೆ ಧಾರವಾಡದ ಅಶೋಕ ಹೊಟೇಲ್‍ ಗೆ ಬಂದಾಗ ಜನಪ್ರತಿನಿಧಿಗಳು ತಲ್ವಾರ್ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದರು.


ಆದರೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಈ ವೇಳೆ ಯಾವುದೇ ಆಯುಧ ಪ್ರದರ್ಶಿಸಬಾರದು. ಆಯುಧ ಹಿಡಿದ ಫೋಟೋ ಕೂಡ ಸಾರ್ವಜನಿಕವಾಗಿ ಹಂಚಿಕೊಳ್ಳೋದು ಕೂಡ ತಪ್ಪು. ಆದ್ರೆ ಬಿಜೆಪಿ ಕಾರ್ಯಕರ್ತ, ಜೋಶಿ ಹಾಗೂ ಬೆಲ್ಲದ ತಲ್ವಾರ್ ಹಿಡಿದ ಫೋಟೋ ಹಾಕಿ ಮತ್ತೊಮ್ಮೆ ನಾವೇ ಗೆಲ್ಲೋದು ಎಂದು ಪೋಸ್ಟ್ ಮಾಡಿ ಚುನಾವಣಾ ಆಯೋಗದ ನಿಯಮವನ್ನು ಉಲ್ಲಂಘಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ