ಅಪ್ರಾಪ್ತ ಬಾಲಕಿಯ ಶವ ಪತ್ತೆ

ಬುಧವಾರ, 2 ನವೆಂಬರ್ 2022 (18:56 IST)
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನ ಗದ್ದೆಯಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆಯಾಗಿದೆ. ಅರೆ ಬೆತ್ತಲೆಯಾಗಿ ಬಾಲಕಿಯ ಶವ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತಿವಾಗಿದೆ. ನಿನ್ನೆ ಬಯಲು ಶೌಚಕ್ಕೆ ಹೋಗಿದ್ದ 9 ನೇ ತರಗತಿ ಬಾಲಕಿ ನಾಪತ್ತೆಯಾಗಿದ್ಲು, ನಂತರ ಬೆಳಿಗ್ಗೆ ಕಬ್ಬಿನ ಗದ್ದೆಯಲ್ಲಿ ಶವ ಪತ್ತೆಯಾಗಿದೆ. ಕಲಬುರಗಿ ಜಿಲ್ಲಾ SP ಇಶಾಪಂಥ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ರಾಮ ಸೇನಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಅತ್ಯಾಚಾರಿ ಆರೋಪಿಗಳನ್ನು ಬಂಧಿಸಿ, ಗಲ್ಲಿಗೇರಿಸುವಂತೆ 
ಅವರು ಆಗ್ರಹಿಸಿದ್ರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ