ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆ

ಶನಿವಾರ, 26 ಆಗಸ್ಟ್ 2023 (18:49 IST)
ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ. ಹೆದ್ದಾರಿ ದರೋಡೆಕೋರರಿಂದ ಕೊಲೆ ಮಾಡಿ ಕೆರೆಯಲ್ಲಿ ಹಾಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ರಾಮನಗರ ಜಿಲ್ಲೆ ಬೈರಮಂಗಲ ಗ್ರಾಮದ ನಿವಾಸಿ ರಾಮ್ ಕುಮಾರ್ ಮೃತಪಟ್ಟ ಯುವಕನಾಗಿದ್ದು, ಮೃತ ಯುವಕ ಕಾಣೆಯಾಗಿರುವ ಬಗ್ಗೆ ಮದ್ದೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ರಾಮ್ ಕುಮಾರ್ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಸ್ನೇಹಿತರ ಜೊತೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಘಟನೆ ನಂತರ ಹೆದ್ದಾರಿ ಗಸ್ತು ವಾಹನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ವೇಳೆ ಗಾಯಗೊಂಡಿದ್ದ ಪ್ರದೀಪ್ ಘಟನೆ ಬಗ್ಗೆ ಪೊಲೀಸರಿಗೆ ಸಂಪೂರ್ಣ ಮಾಹಿತಿ ನೀಡಿದ್ದಾನೆ. ವಿಚಾರಣೆ ನಡೆಸಿದ ಬಳಿಕ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ದೇಹವನ್ನು ಮಂಡ್ಯ ಮಿಮ್ಸ್ ಶವಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ