ನಿನ್ನೆ ತಡರಾತ್ರಿ ಹನುಮಂತನಗರ ಠಾಣಾ ವ್ಯಾಪ್ತಿಯಲ್ಲಿರುವ ಕುಮಾರ್ ಹೋಟೆಲ್ ಗೆ ಚಿಕನ್ ರೋಲ್ ಗಾಗಿ ದೇವರಾಜ್ ಅಂಡ್ ಟೀಂ ಬಂದಿತ್ತು. ಹೊಟೇಲ್ ಮುಚ್ಚುವ ಸಮಯವಾಗಿದ್ದರಿಂದ ಚಿಕನ್ ರೋಲ್ ಇಲ್ಲ ಟೈಂ ಆಗಿದೆ ಕ್ಲೋಸ್ ಮಾಡಲಾಗುತ್ತಿದೆ ಎಂದು ಹೊಟೇಲ್ ಸಿಬ್ಬಂದಿ ಹೇಳಿದ್ದಾನೆ. ಅಕ್ರೋಶಗೊಂಡ ದೇವರಾಜ್ ಹಾಗೂ ಸಹಚರರ ಹೋಟೆಲ್ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮೂವರನ್ನು ಹೋಟೆಲ್ ಸಿಬ್ಬಂದಿ ಥಳಿಸಿ ಕಳುಹಿಸಿದ್ದಾರೆ. ಏಟು ತಿಂದ ಬಳಿಕ ದೇವರಾಜ್ ಅಂಡ್ ಟೀಂ ದೇವೇಗೌಡ ಪೆಟ್ರೋಲ್ ಬಂಕ್ ಗೆ ಹೋಗಿದ್ದಾರೆ. ಅಲ್ಲಿ ಬಾಟಲ್ ನಲ್ಲಿ ಎರಡು ಲೀಟರ್ ಪೆಟ್ರೋಲ್ ಖರೀದಿಸಿದ್ದಾರೆ. ನಂತರ ಸೀದಾ ಕುಮಾರ್ ಹೋಟೆಲ್ ಪಕ್ಕದಲ್ಲೇ ಇರುವ ಹೋಟೆಲ್ ಸಿಬ್ಬಂದಿಯ ರೂಂಗೆ ಬೆಂಕಿಯಿಟ್ಟಿದ್ದಾರೆ. ಮನೆಗೆ ಬಾಗಿಲು, ಕಿಟಕಿಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಎಸ್ಕೇಪ್ ಆಗಿದ್ದಾರೆ. ಅದೃಷ್ಟವಶಾತ್ ಮನೆಯಲ್ಲಿ ವಾಸವಿದ್ದ ಹೋಟೆಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹನುಮಂತನಗರ ಪೊಲೀಸರು ದೇವರಾಜ್ ಹಾಗೂ ಗಣೇಶ್ ಎಂಬುವರನ್ನು ಬಂಧಿಸಿ ಮತ್ತೋರ್ವನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.