ಮನೆ ಕಟ್ಟುವವರೇ ಸ್ವಲ್ಪ ಹುಷಾರ್

ಗುರುವಾರ, 4 ಜೂನ್ 2020 (18:50 IST)
ನೀವು ಮನೆ ಕಟ್ಟುತ್ತಿದ್ದರೆ ಈ ಸುದ್ದಿಯನ್ನು ತಪ್ಪದೇ ಓದಲೇಬೇಕು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದೆ. ಮಳೆಗಾಲದ ಅವಧಿಯಲ್ಲಿ ಮೀನು ಮತ್ತು ಇತರೆ ಜಲಚರಗಳು ಮೊಟ್ಟೆ ಇಡುವ ಹಾಗೂ ಸಂತಾನೋತ್ಪತ್ತಿ ಮಾಡುವ ಹಿನ್ನೆಲೆಯಲ್ಲಿ ಜೂನ್ 8 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೂ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ನದಿಪಾತ್ರಗಳಲ್ಲಿ ಮರಳು ತೆಗೆಯುವಿಕೆ ಮತ್ತು ಸಾಗಾಣಿಕೆಯನ್ನು ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಆದೇಶ ಹೊರಡಿಸಿದ್ದಾರೆ.

ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಬೆಂಗಳೂರು ಇವರು 2020 ಮಾರ್ಚ ತಿಂಗಳಲ್ಲಿ ನೀಡಿರುವ ಕರಾವಳಿ ನಿಯಂತ್ರಣ ವಲಯ ನಿರಾಕ್ಷೇಪಣಾ ಪತ್ರದಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿನ ಮರಳು ದಿಬ್ಬಗಳಿಂದ ಮರಳು ತೆಗೆಯಬಾರದು.

ಮರಳು ಸಾಗಾಣಿಕೆ ಮಾಡಲು ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ತಾತ್ಕಾಲಿಕ ಮರಳು ಪರವಾನಿಗೆ ನೀಡಲಾಗಿದ್ದನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ