ಸಂವಿಧಾನ ಪ್ರತಿ ಸುಟ್ಟ ಪ್ರಕರಣ: ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಮಂಗಳವಾರ, 14 ಆಗಸ್ಟ್ 2018 (14:25 IST)
ದೆಹಲಿಯಲ್ಲಿ ಸಂವಿಧಾನ ಪ್ರತಿಗಳನ್ನು ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ದ್ರೋಹಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕರೆ ನೀಡಿದ್ದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ  ವ್ಯಕ್ತವಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣ ಬಂದ್  ಕರೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಕರೆ ಹಿನ್ನೆಲೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ವ್ಯಾಪಾರ ವಹಿವಾಟು ನಡೆಸುವ ವ್ಯಾಪಾರಿಗಳಿಗೆ ಬಂದ್ ಬಿಸಿ ತಟ್ಟಿದೆ. ಆದರೆ  ಬಸ್, ಖಾಸಗಿ ವಾಹನಗಳ ಯಥಾ ರೀತಿ ಸಂಚಾರವಿದೆ. ಎಂದಿನಂತೆ ಶಾಲೆ- ಕಾಲೇಜ್ ಆರಂಭವಾಗಿವೆ. ಅಗತ್ಯ ವಸ್ತುಗಳನ್ನು ಖರೀದಿಸಲು ಬಂದ್ ಬಿಸಿ ಜನರಿಗೆ ತಟ್ಟಿದೆ.

ಹೋರಾಟ ಸಮಿತಿ ಸದಸ್ಯರು ಸುರಪುರ ಪಟ್ಟಣದ ಗಾಂಧಿ ವೃತ್ತದಲ್ಲಿ ಧರಣಿ ನಡೆಸಿದರು. ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. ಬಂದ್ ಕರೆ ಹಿನ್ನೆಲೆ ಸುರಪುರ ಪಟ್ಟಣದಲ್ಲಿ ವ್ಯಾಪಕ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ