ಬಸ್ ಪ್ರಯಾಣ ಏರಿಕೆಗೆ ತಡೆ ನೀಡಲಾಗಿದೆ ಎಂದ ಸಿಎಂ

ಬುಧವಾರ, 26 ಸೆಪ್ಟಂಬರ್ 2018 (19:08 IST)
ಇತ್ತೀಚಿನ ದಿನಗಳಲ್ಲಿ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳವಾಗಿತ್ತು. ಹೀಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳ ಪ್ರಯಾಣ ದರ ಏರಿಕೆಗೆ ಆಲೋಚನೆ ಮಾಡಲಾಗಿತ್ತು. ಆದರೆ ಪ್ರಯಾಣದರ ಏರಿಕೆಗೆ ತಡೆ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಸ್ ಪ್ರಯಾಣ ದರ ಏರಿಕೆಯನ್ನು ನಾನೇ ತಡೆ ಹಿಡಿದಿದ್ದೇನೆ ಎಂದರು. ಪ್ರಸ್ತುತ ದಿನಗಳಲ್ಲಿ ಪ್ರಯಾಣ ದರ ಏರಿಕೆ ಮಾಡಿದರೆ ಜನರಿಗೆ ಹೊರೆಯಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ನ ಬೆಲೆಯಲ್ಲಿ  2 ರೂ. ಕಡಿಮೆ ಮಾಡಲಾಗಿದೆ. ಸರಕಾರಕ್ಕೆ ಬೊಕ್ಕಸಕ್ಕೆ ಧಕ್ಕೆಯಾದರೂ ಇತರ ಮೂಲಗಳಿಂದ ಸರಿಪಡಿಸಲಾಗುತ್ತದೆ ಎಂದರು.

ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ಮಾಡಿ ಸಂಸ್ಥೆಗೆ ಆಗುತ್ತಿರುವ ನಷ್ಟವನ್ನು ಭರಿಸುವ ಕುರಿತು ಚರ್ಚಿಸುವುದಾಗಿ ಸಿಎಂ ಹೆಚ್.ಡಿ.ಕೆ. ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ