ಅಚ್ಚರಿ: ಬ್ರಿಡ್ಜ್ ಗೆ ಕಾರು ಢಿಕ್ಕಿಯಾಗಿ ಉರುಳಿಬಿದ್ರೂ ಬದುಕಿದ್ರು
ರಸ್ತೆ ಪಕ್ಕದ ಬ್ರಿಡ್ಜ್ ತಡೆಗೋಡೆಗೆ ಕಾರ್ ಡಿಕ್ಕಿ ಹೊಡೆದರೂ ಆಶ್ಚರ್ಯಕರ ರೀತಿಯಲ್ಲಿ ಕಾರಿನಲ್ಲಿದ್ದರು ಪಾರಾಗಿದ್ದಾರೆ.
ಡಿಕ್ಕಿ ರಭಸಕ್ಕೆ ಹೆದ್ದಾರಿಯಲ್ಲಿ ಉರುಳಿ ಬಿದ್ದಿದೆ ಕಾರ್. ಬೆಳಗಾವಿಯ ಕಿತ್ತೂರು ತಾಲೂಕಿನ ಕುರುಬರ ತೆಗ್ಗಿನ ಬಳಿ ರಾಷ್ಟ್ರೀಯ ಹೆದ್ದಾರಿ- 4 ರಲ್ಲಿ ನಡೆದ ಘಟನೆ ನಡೆದಿದೆ.
ಬೆಳಗಾವಿ ಕಡೆ ಸಾಗುತ್ತಿದ್ದ ಕಾರ್ ಇಕ್ಕಟ್ಟಾದ ರಸ್ತೆ, ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಬ್ರಿಡ್ಜ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ಅಂಬುಲೇನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.