ಕಾರು ಪಲ್ಟಿ, ಬಚಾವ್ ಆದ ದಂಪತಿ

ಶುಕ್ರವಾರ, 14 ಜುಲೈ 2023 (21:11 IST)
ಕಾರಿನಲ್ಲಿ ಹೋಗುತ್ತಿದ್ದಾಗ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಪತಿ ಮೇಲಿನ ಕೋಪಕ್ಕೆ ಪತ್ನಿ ದಿಢೀರ್‌ ಸ್ಟೇರಿಂಗ್ ಎಳೆದಿದ್ದು, ಈ ವೇಳೆ ಕಾರು ಪಲ್ಟಿಯಾದ ಘಟನೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್​​​ ಠಾಣೆ ಬಳಿ ತಡರಾತ್ರಿ ನಡೆದಿದೆ. ಅದೃಷ್ಟವಶಾತ್​​​ ಕಾರಿನಲ್ಲಿದ್ದ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಮಾರ್ಕೆಟ್​ ಕಡೆಯಿಂದ ದಂಪತಿ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಪತಿ ಮೇಲಿನ ಕೋಪಕ್ಕೆ ಪತ್ನಿ ದಿಢೀರ್‌ ಸ್ಟೇರಿಂಗ್ ಎಳೆದಿದ್ದಾಳೆ. ಸ್ಟೇರಿಂಗ್ ಎಳೆದ ರಭಸಕ್ಕೆ ರಸ್ತೆಯಲ್ಲಿಯೇ ಕಾರು ಪಲ್ಟಿ ಹೊಡೆದಿದೆ. ಕೂಡಲೇ ದಂಪತಿಯನ್ನು ಹಲಸೂರು ಗೇಟ್​​ ಠಾಣೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಮದ್ಯ ಸೇವಿಸಿ ಕಾರು ಚಲಾಯಿಸಿರುವ ಅನುಮಾನ ಹಿನ್ನೆಲೆ ವಿಚಾರಣೆ ನಡೆಸಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ