ಐಎಂಎ ಪ್ರಕರಣ; ರೋಷನ್ ಬೇಗ್ ರನ್ನು ವಶಕ್ಕೆ ಪಡೆದ ಎಸ್ ಐ ಟಿ

ಮಂಗಳವಾರ, 16 ಜುಲೈ 2019 (09:17 IST)
ಬೆಂಗಳೂರು : ಎಸ್.ಐ.ಟಿ ವಿಚಾರಣೆ ಹಾಜರಾಗದ ಹಿನ್ನಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೋಷನ್ ಬೇಗ್ ಅವರನ್ನು ಎಸ್ ಐ ಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದೆ.




ಐಎಂಎ ವಂಚನೆ ಪ್ರಕರಣದಲ್ಲಿ ಐಎಂಎ ಮಾಲೀಕ ಮನ್ಸೂರ್ ಖಾನ್, ಹಲವು ಬಾರಿ ರೋಷನ್ ಬೇಗ್ ಹೆಸರನ್ನು ಪ್ರಸ್ತಾಪಿಸಿದ್ದು, ವಿಚಾರಣೆಗೆ ಹಾಜರಾಗಲು ರೋಷನ್ ಬೇಗ್ ಅವರಿಗೆ ಎಸ್‌ ಐಟಿ ನೋಟಿಸ್ ನೀಡಿತ್ತು. ಆದರೆ ಕಾರಣ ನೀಡಿ ವಿಚಾರಣೆಗೆ ಅವರು ಹಾಜರಾಗಿರಲಿಲ್ಲ.


ಆದರೆ ಅವರು ಬೆಂಗಳೂರು ಬಿಟ್ಟು ಮುಂಬೈಗೆ ಹೋಗುತ್ತಿದ್ದ ವಿಚಾರ ತಿಳಿದ ಎಸ್ ಐ ಟಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ