ಹಿಂಸಾಚಾರಕ್ಕೆ ಅಲ್ಲಿನ ರಾಜಕೀಯ ಪಕ್ಷಗಳ ಮುಖಂಡರೇ ಕಾರಣ– ರಾಮಲಿಂಗಾರೆಡ್ಡಿ

ಭಾನುವಾರ, 7 ಜನವರಿ 2018 (20:23 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾದ ಹಿಂಸಾಚಾರಕ್ಕೆ ಅಲ್ಲಿನ ರಾಜಕೀಯ ಪಕ್ಷಗಳ ಮುಖಂಡರು ಕಾರಣ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ರಾಜ್ಯದ 30ಜಿಲ್ಲೆಗಳ ಪೈಕಿ ಕರಾವಳಿಯಲ್ಲಿ ಮಾತ್ರ ಇಂತಹ ಗಲಭೆಗಳು ನಡೆಯುತ್ತಿದೆ. ರಾಜಕೀಯ ಪಕ್ಷಗಳು ಚುನಾವಣೆಯನ್ನು ಮುಂದಿಟ್ಟುಕೊಂಡು ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಮಂಗಳೂರಿನಲ್ಲಿ ಸೂಕ್ತ ಬಂದೂಬಸ್ತ್ ಮಾಡಲಾಗಿದೆ. ಬಷೀರ್ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ ವ್ಯಕ್ತಿ ಆಗಿರಲಿಲ್ಲ. ಹೀಗಾಗಿ ಆತನನ್ನು ಕೊಲೆಮಾಡಬಹುದು ಎಂದು ಪೊಲೀಸರು ಊಹಿಸಲಿಲ್ಲ. ಆದರೆ ಮುನ್ನೆಚ್ಚರಿಕೆ ವಹಿಸುವಲ್ಲಿ ಪೊಲೀಸರು ವಿಫಲರಾಗಿಲ್ಲ. ಆದರೆ, ಆರ್‌ಎಸ್‌ಎಸ್, ಪಿಎಫ್‍ಐ ಸೇರಿದಂತೆ ಅಲ್ಲಿನ ಸಂಘಟನೆಗಳು ಸೌಹಾರ್ದತೆ ಮೂಡಿಸುವ ಕೆಲಸ ಮಾಡುತ್ತಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ