ಇಂದು ರಾಜ್ಯಕ್ಕೆ ನೆರೆ ಪರಿಹಾರ ಘೋಷಣೆ ಮಾಡುತ್ತಾ ಕೇಂದ್ರ ಸರ್ಕಾರ

ಶನಿವಾರ, 17 ಆಗಸ್ಟ್ 2019 (10:44 IST)
ನವದೆಹಲಿ : ಇಂದು ಕೇಂದ್ರ ಸರ್ಕಾರ ರಾಜ್ಯದಲ್ಲಿ ಸಂಭವಿಸಿದ  ನೆರೆ ಹಾನಿಗೆ ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.
ಸಿಎಂ ಬಿ . ಎಸ್ . ಯಡಿಯೂರಪ್ಪ ಅವರು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ನೆರೆ ಹಾನಿ ಬಗ್ಗೆ ಮಾಹಿತಿ ನೀಡಿದ್ದಾರೆ. ಹಾಗೇ  ಇಂದು ಈ ವಿಚಾರವಾಗಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯಲ್ಲಿ ಇಂದು ಬರ ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಈ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡ ಭಾಗಿಯಾಗಲಿದ್ದು, ಕರ್ನಾಟಕಕ್ಕೆ ತಕ್ಷಣಕ್ಕೆ ಕನಿಷ್ಟ 2 ಸಾವಿರ ಕೋಟಿ ರೂ. ಹಣ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ