ನೆರೆ ಹಾನಿ ಅಧ್ಯಯನಕ್ಕೆಂದು ಇಂದು ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ತಂಡ
ಶನಿವಾರ, 24 ಆಗಸ್ಟ್ 2019 (11:59 IST)
ಬೆಂಗಳೂರು : ರಾಜ್ಯದಲ್ಲಿ ಉಂಟಾದ ನೆರೆ ಹಾನಿಯನ್ನು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ಅಧ್ಯಯನ ತಂಡ ಇಂದು ರಾಜ್ಯಕ್ಕೆ ಆಗಮಿಸಲಿದೆ.
ಈಗಾಗಲೇ ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಅವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದರೂ ಪರಿಹಾರ ಘೋಷಿಸಿಲ್ಲ. ಈ ಬಗ್ಗೆ ರಾಜ್ಯದೆಲ್ಲೆಡೆ ಕೇಂದ್ರ ಸರ್ಕಾರದ ವಿರುದ್ಧ ಭಾರೀ ವಿರೋಧ ವ್ಯಕ್ತವಾಗಿತ್ತು.
ಇದೀಗ ನೆರೆ ಹಾನಿಯನ್ನು ಅಧ್ಯಯನ ನಡೆಸಲು ಕೇಂದ್ರದ ಅಧ್ಯಯನ ತಂಡ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಇಂದು ಸಂಜೆ 5.45ಕ್ಕೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.