ಸಿಇಟಿ ಫಲಿತಾಂಶ ಮೇ 25 ರಂದು ಪ್ರಕಟ

ಶುಕ್ರವಾರ, 24 ಮೇ 2019 (16:58 IST)
ಸಾಮಾನ್ಯ ಪ್ರವೇಶ ಪರೀಕ್ಷೆ(ಸಿ.ಇ.ಟಿ.) ಫಲಿತಾಂಶವು ಮೇ 25 ರಂದು ಹೊರಬೀಳಲಿದೆ. 

ಸಿ ಇ‌ ಟಿ ಫಲಿತಾಂಶವನ್ನು  ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು ಬೆಂಗಳೂರಿನ ಕರ್ನಾಟಕ ಪರೀಕ್ಷಾ ‌ಪ್ರಾಧಿಕಾರದ ಕಛೇರಿಯಲ್ಲಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ.

ಎಂಜಿನಿಯರಿಂಗ್ ಕಾಲೇಜು ಪ್ರವೇಶಕ್ಕೆ ಮುಂದಾಗಿರುವ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಏ. 29 ಹಾಗೂ 30 ರಂದು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ಪರೀಕ್ಷೆ ಬರೆದಿದ್ದರು. ಇದೀಗ ಸಿಇಟಿ ಫಲಿತಾಂಶಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ