ಮಾಡಾಳ್‍ನ ಮೈಂಟೇನ್ ಮಾಡೋದೇ ‘ಲೋಕಾ’ಗೆ ಸವಾಲು

ಶನಿವಾರ, 1 ಏಪ್ರಿಲ್ 2023 (09:54 IST)
ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪಡೆದ ಆರೋಪದಲ್ಲಿ ಲೋಕಾ ಕಸ್ಟಡಿಯಲ್ಲಿದ್ದು, ಇದೀಗ ಅವರನ್ನು ಮೇಂಟೈನ್ ಮಾಡೋದು ಲೋಕಾಯುಕ್ತ ಪೊಲೀಸರಿಗೆ ದೊಡ್ಡ ಸವಾಲಾಗಿದೆ ಎಂಬ ಮಾಹಿತಿ ಲಭಿಸಿದೆ.
 
ಹೌದು. ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಬೆಡ್ ರೂಂನಲ್ಲಿ ಕೋಟಿ ಕೋಟಿ ಹಣ ಸಿಕ್ಕ ಪ್ರಕರಣದಲ್ಲಿ ಲೋಕಾಯಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧನ ಮಾಡಿದ್ದಾರೆ. ಕಳೆದ ನಾಲ್ಕು ದಿನದಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಪೊಲೀಸರ ಕಸ್ಟಡಿಯಲ್ಲಿದ್ದು, ಕೋಟಿ ಕೋಟಿ ಹಣದ ತನಿಖೆ ಎದುರಿಸುತ್ತಿದ್ದಾರೆ. ದಿನಕ್ಕೆ ನಾಲ್ಕಾರು ಗಂಟೆ ವಿಚಾರಣೆ ಎದುರಿಸುತ್ತಿದ್ದಾರೆ. 

ತನಿಖೆ ಬಳಿಕ ಲೋಕಾಯುಕ್ತ ಕಸ್ಟಡಿಯಲ್ಲಿರೋ ಮಾಡಾಳ್ ವಿರೂಪಾಕ್ಷಪ್ಪ ಲೋಕಾ ಕಚೇರಿಯಲ್ಲಿ ರಾತ್ರಿ ಕಳೆಯಲು ಸಾಕಷ್ಟು ಹೆಣಗಾಡುತ್ತಿದ್ದಾರಂತೆ. ಇದ್ದಕ್ಕಿದ್ದಂತೆ ಮೌನಕ್ಕೆ ಜಾರಿ ಹೋಗೋದು ಗಂಟೆಗಟ್ಟಲೆ ಯಾರ ಜೊತೆ ಮಾತನಾಡದೇ ಸುಮ್ಮನಾಗೋದು. ಕೆಲವು ವೇಳೆ ಗಳಗಳ ಅಳಲು ಶುರು ಮಾಡ್ಕೊಳ್ತಾರಂತೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಈ ನಡೆ ಲೋಕಾಯುಕ್ತ ಪೊಲೀಸರಿಗೆ ದೊಡ್ಡ ಸವಾಲಾಗಿದೆ .

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ