ಬೆಂಗಳೂರು : ಪಕ್ಷದ ಸಂಘಟನೆಗಾಗಿ ಕಾರ್ಯಕಾರಿಣಿ ಸಭೆ ನಡೆಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ಮಾರ್ಗದರ್ಶನದಲ್ಲಿ ಸಭೆ ನಡೆಸುತ್ತೇವೆ. ಮುಂದಿನ ಚುನಾವಣೆಯಲ್ಲಿ 150 ಸೀಟ್ ಗುರಿಯನ್ನು ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.