ಗ್ರಾಮೀಣ ಭಾಗದಲ್ಲಿ 10 ಗಂಟೆ ವಿದ್ಯುತ್ ಪೂರೈಕೆಗೆ ಕ್ರಮ ಎಂದ ಸಿಎಂ

ಮಂಗಳವಾರ, 11 ಡಿಸೆಂಬರ್ 2018 (19:36 IST)
ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ 10 ಗಂಟೆಗಳ ಕಾಲ ವಿದ್ಯುತ್ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ನೀಡಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ವಿದ್ಯುತ್ ಇಲಾಖೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರ ನೀಡುವ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಹಾಗಾಗಿ ಗ್ರಾಮೀಣ ಪ್ರದೇಶದಲ್ಲಿ ಕನಿಷ್ಠ 10 ಗಂಟೆ ವಿದ್ಯುತ್ ನೀಡಿ ಎಂದು ಸಲಹೆ ಮಾಡಿದ್ದರು.

ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕರ ಸಲಹೆಯನ್ನು ಪರಿಶೀಲಿಸುತ್ತೇನೆ. ಗ್ರಾಮೀಣ ಭಾಗದಲ್ಲಿ 10 ಗಂಟೆ ವಿದ್ಯುತ್ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ