ಸಮ್ಮಿಶ್ರ ಸರಕಾರ ಐದು ವರ್ಷ ಪೂರ್ಣಗೊಳಿಸುತ್ತದೆ: ಎಂಬಿ

ಮಂಗಳವಾರ, 11 ಸೆಪ್ಟಂಬರ್ 2018 (20:46 IST)
ರಾಜ್ಯದ ಸಮ್ಮಿಶ್ರ ಸರಕಾರ ಐದು ವರ್ಷಗಳ ಆಡಳಿತ ಪೂರ್ಣಗೊಳಿಸುತ್ತದೆ. ಜಾರಕಿಹೊಳಿ ಹಾಗೂ ಬಿಜೆಪಿಯ ಶ್ರೀರಾಮುಲು ಒಂದೇ ಸಮುದಾಯಕ್ಕೆ ಸೇರಿದವರು. ಸಮಾಜದ ಹಿನ್ನೆಲೆಯಲ್ಲಿ ಅವರು ಒಂದೆಡೆ ಸೇರಬಹುದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಾಲಿ  ಶಾಸಕ ಹೇಳಿದ್ದಾರೆ.

ಬಿ.ಶ್ರೀರಾಮುಲು ಹಾಗೂ ಜಾರಕಿಹೊಳಿ ಒಂದೇ ಸಮುದಾಯಕ್ಕೆ ಸೇರಿದವರು. ಅವರು ಸಮಾಜದ ವಿಷಯ ಕುರಿತಾಗಿ ಒಂದೆಡೆ ಸೇರಿರಬಹುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು,ಈ ಹಿಂದೆ ನಾನು ಹಾಗೂ ಯಡಿಯೂರಪ್ಪ ಒಂದೇ ವಿಮಾನದಲ್ಲಿ ಪ್ರಯಾಣ ಮಾಡಿದ್ದೇವೆ. ಹಾಗಂತ ನಮ್ಮಿಬ್ಬರ ನಡುವೆ ಏನೂ ಇಲ್ಲ. ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದ ಅವರು, ಮೈತ್ರಿ ಸರಕಾರ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ