ಅಮಿತ್ ಶಾ ಬಂದ ನಂತರ ರಾಜ್ಯದಲ್ಲಿ ಕೋಮುಗಲಭೆ- ಎಚ್.ಎಂ.ರೇವಣ್ಣ

ಮಂಗಳವಾರ, 9 ಜನವರಿ 2018 (18:05 IST)

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಹೋದ ಮೇಲೆ ಕೋಮು ಗಲಭೆಗಳು ನಡೆಯುತ್ತಿವೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ಅಮಿತ್ ಶಾ ಬಂದುಹೋಗುವವರೆಗೆ ಸುಮ್ಮನಿದ್ದ ಬಿಜೆಪಿಯವರು ಈಗ ಬಾಯಿಗೆ ಬಂದಂತೆ ಮಾತನಾಡಿ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಪ್ರತಾಪ್ ಸಿಂಹ ಅವರು ಪ್ರಚೋದನಾತ್ಮಕವಾಗಿ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಯಾರೇ ಸತ್ತರು, ಅವರನ್ನು ಬಿಜೆಪಿಯವರು ಎಂದು ಬಿಂಬಿಸುತ್ತಿದ್ದಾರೆಆದರೆ, ಕಾಂಗ್ರೆಸನವರು ಬಿಜೆಪಿಯಂತೆ ಇನ್ನೊಂದು ಸಮಾಜದವರನ್ನು ದ್ವೇಷಿಸುವುದಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ