ಹಂತಕರನ್ನು ಶೂಟೌಟ್ ಮಾಡಿ ಎಂದಿದ್ದಕ್ಕೆ ಸಿಎಂ ವಿರುದ್ಧ ದೂರು ದಾಖಲು
ಗುರುವಾರ, 27 ಡಿಸೆಂಬರ್ 2018 (09:59 IST)
ಬೆಂಗಳೂರು : ಜೆಡಿಎಸ್ ಮುಖಂಡನ ಹತ್ಯೆ ಮಾಡಿದವರನ್ನು ಶೂಟೌಟ್ ಮಾಡಿ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹೇಳಿರುವುದಕ್ಕೆ ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ.
ಡಿ.24 ರಂದು ಮಂಡ್ಯ ದ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿಯೇ ಕತ್ತು ಕೊಯ್ದು ಹತ್ಯೆ ಮಾಡಿದ್ದರು, ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹಂತಕರನ್ನು ಶೂಟೌಟ್ ಮಾಡಿ ಎಂದು ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದರು.
ಸಿಎಂ ಈ ಹೇಳಿಕೆಗೆ ಬಾರೀ ವಿರೋಧ ವ್ಯಕ್ತವಾಗಿದ್ದು ಆರ್ಟಿಐ ಕಾರ್ಯಕರ್ತರ ನರಸಿಂಹಮೂರ್ತಿ ಎಂಬುವವರು ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಮುಖ್ಯಮಂತ್ರಿ ಅವರ ವಿರುದ್ಧ ಕೇಸು ದಾಖಲಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.